ಶಿರಹಟ್ಟಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಮಧ್ಯಾಹ್ನ ಒಂದು ಗಂಟೆಯವರೆಗೆ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಮಧ್ಯಾಹ್ನ ಸುರಿದ ಭಾರಿ ಮಳೆಗೆ ಜಮೀನುಗಳಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ಬಿತ್ತನೆ ಮಾಡಿದ ಜಮೀನಿಗೆ ಬೆಳೆಗಳು ಚಿಗುರೊಡೆಯಲು ಈ ಮಳೆ ಸಹಕಾರಿ ಆಗಿದ್ದು, ರೈತರ ಖುಷಿಯನ್ನು ಇಮ್ಮಡಿಗೊಳಿಸಿದೆ. ಪಟ್ಟಣದಲ್ಲಿ ಬೀಜ ಹಾಗೂ ರಸ ಗೊಬ್ಬರ ಖರೀದಿ ಜೋರಾಗಿತ್ತು.

ಶಿರಹಟ್ಟಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು, ಬಸ್ಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಪ್ರಯಾಣಿಕರು ಈ ರಸ್ತೆ ಮೂಲಕವೇ ಬಸ್ ನಿಲ್ದಾಣಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯಲ್ಲಿನ ಗುಂಡಿ ಮುಚ್ಚಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-640027051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.