ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಬಲಪಡಿಸಲು ಯುವಶಕ್ತಿ ಬಳಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ
Last Updated 24 ಆಗಸ್ಟ್ 2021, 7:48 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ‘ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವಜನತೆಗೆ ಆದ್ಯತೆ ನೀಡಲಾಗುವುದು. ಮುಂಬರುವ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಅಲ್ಲದೇ ರಾಜ್ಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು’ ಎಂದು ಹೇಳಿದರು.

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಅಭಿಮಾನಿಗಳ ಭೇಟಿಗಾಗಿ ಸೋಮವಾರ ಬಂದಿದ್ದ ಅವರು ಪಟ್ಟಣದ ಜೆಡಿಎಸ್ ಕಾರ್ಯಕರ್ತ ಶಂಕರ ಬಾಳಿಕಾಯಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದಾರೆ ಎಂದು ಹೊಗಳುತ್ತಾರೆ. ಆದರೆ ಚುನಾವಣೆ ಬಂದಾಗ ಮರೆತು ಬಿಡುತ್ತಾರೆ. ಸಾಲಮನ್ನಾದಿಂದ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ. ರೈತರು ಸಾಲ ಮಾಡದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಚಿಂತನೆ ನಡೆಸಲಾಗುತ್ತಿದೆ’ ಎಂದರು.

ಶಾಸಕ ಎಚ್.ಎನ್.ಕೋನರೆಡ್ಡಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಪ್ರಧಾನ ಕಾರ್ಯದರ್ಶಿ ಶಂಕರ ಬಾಳಿಕಾಯಿ, ತಾಲ್ಲೂಕು ಘಟಕದ ಅಧ್ಯಕ್ಷ ಪದ್ಮರಾಜ ಪಾಟೀಲ, ಜಾಕೀರ್‌ ಹುಸೇನ್ ಹವಾಲ್ದಾರ, ಎಸ್.ಐ.ಲಂಗೋಟಿ, ಸೋಮನಗೌಡ ಪಾಟೀಲ, ಪುರಸಭೆ ಸದಸ್ಯರಾದ ಪ್ರವೀಣ ಬಾಳಿಕಾಯಿ, ಮುಸ್ತಾಕ್‍ಅಹಮ್ಮದ್ ಶಿರಹಟ್ಟಿ ಇದ್ದರು.

‘ಸ್ವತಂತ್ರ್ಯ ಸರ್ಕಾರ ರಚಿಸಲು ಅವಕಾಶ ಕೊಡಿ’

ಶಿರಹಟ್ಟಿ: ರಾಜ್ಯದಲ್ಲಿ ಜನ ಪ್ರವಾಹ, ಕೋವಿಡ್ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದು, ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಹಂಗಿಲ್ಲದೆ ಸ್ವತಂತ್ರವಾಗಿ ಜೆಡಿಎಸ್‌ ಸರ್ಕಾರ ರಚನೆ ಮಾಡಲಿಕ್ಕೆ ಅವಕಾಶ ಕೊಡಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿನಂತಿಸಿದರು.

ತಾಲ್ಲೂಕಿನ ಸುಗ್ನಳ್ಳಿ ಗ್ರಾಮದ ಸಾರ್ವಜನಿಕರ ಅಹವಾಲಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಜನತಾ ದಳದ ಸರ್ಕಾರ ಬರುತ್ತದೆ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT