ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ: ₹811.26 ಕೋಟಿ ಹಾನಿ

ಮಳೆಯಿಂದ ಅಪಾರ ಹಾನಿ; ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿ– ಬಿ.ಸಿ.ಪಾಟೀಲ
Last Updated 12 ಸೆಪ್ಟೆಂಬರ್ 2022, 5:28 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಅಧಿಕ ಪ್ರಮಾಣದಲ್ಲಿ ಬೆಳೆ, ಮನೆಗಳು ಹಾಗೂ ಸರ್ಕಾರಿ ಆಸ್ತಿ ಹಾನಿಗೊಳಗಾಗಿದ್ದು, ಹಾನಿಯ ಪ್ರಮಾಣವನ್ನು ₹811.26 ಕೋಟಿ ಎಂದು ಅಂದಾಜಿಸಲಾಗಿದೆ. ಹಾನಿಯ ಸಮೀಕ್ಷಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಸಂತ್ರಸ್ತ ಕುಟುಂ ಬಗಳಿಗೆ ಸರ್ಕಾರದಿಂದ ಸಿಗಲಿರುವ ಪರಿಹಾರವನ್ನು ಶೀಘ್ರ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.

‘ಕಳೆದ ತಿಂಗಳು ಬಂದಿದ್ದ ಸಂದರ್ಭ ದಲ್ಲಿ ಜಿಲ್ಲೆಯಲ್ಲಿ 93 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿತ್ತು. ಈ ಪೈಕಿ 76 ಸಾವಿರ ಹೆಕ್ಟೇರ್‌ ಪ್ರದೇಶದ ಬೆಳೆ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ನೋಂದಾಯಿಸಲಾಗಿದೆ. ಸೆ.12ರ ನಂತರ ಪರಿಹಾರ ಮೊತ್ತವನ್ನು ಅರ್ಹರಿಗೆ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಈವರೆಗೆ 7 ಮಂದಿ ಮೃತಪಟ್ಟಿದ್ದು, ಈ ಪೈಕಿ ನಾಲ್ಕು ಕುಟುಂಬಗಳಿಗೆ ತಲಾ ₹5 ಲಕ್ಷದಂತೆ ಪರಿಹಾರ ವಿತರಿಸಲಾಗಿದೆ. ಜತೆಗೆ ಇಬ್ಬರು ಕರ್ತವ್ಯ ನಿರತ ಪೋಲಿಸ್‌ ಕಾನ್‌ಸ್ಟೆಬಲ್‌ಗಳು ಮೃತಪಟ್ಟಿದ್ದು ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯ ಬೇಕಿರುವ ಪರಿಹಾರ ಮೊತ್ತವನ್ನು ಶೀಘ್ರ ದೊರಕಿಸಿಕೊಡುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ತಿಳಿಸಲಾಗಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಈವರೆಗೆ 59 ಜಾನು ವಾರುಗಳ ಜೀವಹಾನಿಯಾಗಿದೆ. ಹಾನಿಯಾದ 1,601 ಮನೆಗಳ ಪೈಕಿ, 655 ಮನೆಗಳಿಗೆ ಮಾರ್ಗಸೂಚಿಗಳ ನ್ವಯ ಪರಿಹಾರ ನೀಡಲಾಗಿದೆ. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಲೋಕೋಪಯೋಗಿ ಇಲಾಖೆ ರಸ್ತೆಗಳು ಅಧಿಕ ಪ್ರಮಾಣದಲ್ಲಿ ಹಾನಿಗೊಳಗಾ ಗಿದೆ. ಹಾನಿಯಾದ ಬೆಳೆ, ಮನೆಗಳಿಗೆ ಸರ್ಕಾರದ ನೆರವನ್ನು ಪಕ್ಷಪಾತ ಮಾಡದೆ ವಿತರಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.

‘ಕೃಷಿ ಹಾಗೂ ತೋಟಗಾರಿಕೆ ಪ್ರದೇಶಗಳ ಹಾನಿ ಪ್ರಮಾಣ ಅಪಾರ ವಾಗಿದ್ದು ಈ ಕುರಿತು ಸಮೀಕ್ಷೆ ಪ್ರಗತಿಯಲ್ಲಿದೆ. ರಾಜ್ಯ ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಸೇರಿ 612 ಕಿ.ಮೀ. ರಸ್ತೆ ಹಾನಿಗೊಳಗಾಗಿದ್ದು, ₹96 ಕೋಟಿ ಹಾನಿ ಪ್ರಮಾಣ ಅಂದಾಜಿಸಲಾಗಿದೆ. 94 ಸೇತುವೆಗಳು ಹಾನಿಯಾಗಿದ್ದು, ₹34 ಕೋಟಿ ನಷ್ಟವಾಗಿದೆ’ ಎಂದು ತಿಳಿಸಿದರು.

‘ಸಣ್ಣ ನೀರಾವರಿ ಇಲಾಖೆಗೆ ಸೇರಿದ 5 ಕೆರೆಗಳು ಹಾನಿಗೀಡಾಗಿದ್ದು, ಅಂದಾಜು ₹1 ಕೋಟಿ ಹಾನಿಯಾಗಿದೆ. ಮಳೆಯಿಂದಾಗಿ 241 ವಿದ್ಯುತ್‌ ಕಂಬ ಗಳು ಹಾನಿಗೊಳಗಾಗಿದ್ದು, ₹28 ಲಕ್ಷ ನಷ್ಟವಾಗಿದೆ. ಅದೇರೀತಿ, ಜಿಲ್ಲೆ ಯಲ್ಲಿನ 174 ಪ್ರಾಥಮಿಕ ಶಾಲಾ ಕೊಠಡಿಗಳಿಗೆ ಹಾನಿಯಾಗಿದ್ದು, ₹5.6 ಕೋಟಿ ಹಾಗೂ 122 ಅಂಗನವಾಡಿ ಕೊಠಡಿಗಳು ಹಾನಿಯಾಗಿದ್ದು, ₹2.44 ಕೋಟಿ ಹಾನಿ ಅಂದಾಜಿಸಲಾಗಿದೆ’ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುಶೀಲಾ ಬಿ., ಹೆಚ್ಚುವರಿ ಜಿಲ್ಲಾ ಧಿಕಾರಿ ಎಂ.ಪಿ.ಮಾರುತಿ, ಉಪ ವಿಭಾ ಗಾಧಿಕಾರಿ ಅನ್ನಪೂರ್ಣ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ. ಇದ್ದರು.

*

ಅಧಿಕಾರಿಗಳು ಸಂತ್ರಸ್ತರಿಗೆ ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು. ನಿಖರ ಹಾನಿಯ ಪ್ರಮಾಣ ಅಂದಾಜಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ತಿಳಿಸಲಾಗಿದೆ.
-ಬಿ.ಸಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT