ನವಲಗುಂದ: ಕಳೆದ ಎರಡು, ಮೂರು ದಿನಗಳಿಂದ ಮಳೆಯಾಗುತ್ತಿದ್ದು, ತಾಲ್ಲೂಕಿನಲ್ಲಿಯ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ

ಮಂಗಳವಾರದ ಮಳೆಯಿಂದಾಗಿ ಮಳೆಗಾಲದ ಆರಂಭದಲ್ಲಿಯೇ ತುಪ್ಪರಿಹಳ್ಳ ತುಂಬಿ ಹರಿದಿದ್ದು, ವಿಶೇಷವಾದರೂ ಶಿರೂರ-ಆಹೆಟ್ಟಿ ಮಧ್ಯದಲ್ಲಿರುವ ತುಪ್ಪರಿಹಳ್ಳದ ನೀರು ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಮರಿಣಾಮ ಎರಡು ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಿರಕೋಳ, ಹನಸಿ, ಜಾವುರು ಬಳ್ಳೂರ, ಸೇತುವೆ ಮೇಲೆ ನೀರು ಹರಿಯುತ್ತಿದ್ದೂ ರಸ್ತೆ ಸಂಪರ್ಕ ಕಡಿತಗೊಂಡಿದೆ ಈ ಗ್ರಾಮಗಳ ಜನತೆಗೆ ಆತಂಕ ಶುರುವಾಗಿದೆ.

ಮಳೆ ಅಥವಾ ಹಳ್ಳದ ನೆರೆಯಿಂದ ಯಾವುದೇ ಅನಾಹುತಗಳಾದ ಬಗ್ಗೆ ವರದಿಯಾಗಿಲ್ಲ. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ನವಲಗುಂದಕ್ಕೆ ಮಂಗಳವಾರದ ಸಂತೆಗೆ ಬರುವ ಗ್ರಾಮಸ್ಥರು ಪರದಾಡುವಂತಾಗಿದೆ.

ಆರಂಜ್ ಅಲರ್ಟ್: ಇನ್ನೂ ಮೂರು ನಾಲ್ಕು ದಿನ ಮಳೆಯಾಗುವ ಸಂಭವವಿದ್ದು, ಈಗಾಗಲೇ ಅಲರ್ಟ್ ಘೋಷಿಸಿದೆ. ತಾಲ್ಲೂಕಿನಲ್ಲಿ ಗುಡುಗು-ಸಿಡಿಲಿನಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಮನೆಯಲ್ಲಿಯೇ ಇರಲು ಅಥವಾ ಸುರಕ್ಷಿತ ಸ್ಥಳದಲ್ಲಿರಬೇಕು. ಹಳ್ಳದ ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು. ಈಜಾಡುವುದು. ದನಕರು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರ ಚಟುವಟಿಕೆ ನಡೆಸದಂತೆ ಎಚ್ಚರ ವಹಿಸಬೇಕು. ತುರ್ತು ಸಂದರ್ಭದಲ್ಲಿ ತಹಶೀಲ್ದಾರ್ ಕಾರ್ಯಾಲಯದ ದೂ–0830-229240 ಅಥವಾ 1077 ನಂಬರಿಗೆ ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಸುಧೀರ್ ಸಾಹುಕಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.