ವರಿಷ್ಠರ ಮನೆಗೆ ಟಿಕೆಟ್‌ ಆಕಾಂಕ್ಷಿಗಳ ಪಾದಯಾತ್ರೆ..!

7

ವರಿಷ್ಠರ ಮನೆಗೆ ಟಿಕೆಟ್‌ ಆಕಾಂಕ್ಷಿಗಳ ಪಾದಯಾತ್ರೆ..!

Published:
Updated:
Deccan Herald

ರೋಣ: ಪುರಸಭೆಗೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆ.17 ಕೊನೆಯ ದಿನವಾಗಿದ್ದು, ಟಿಕೆಟ್‌ ಆಕಾಂಕ್ಷಿಗಳಲ್ಲಿ ದುಗುಡ ಹೆಚ್ಚಿದೆ. ಆಕಾಂಕ್ಷಿಗಳು ಟಿಕೆಟ್‌ ಭಾಗ್ಯಕ್ಕಾಗಿ ವರಿಷ್ಠರ ಮನೆ ಬಾಗಿಲಿಗೆ ಹಾಗೂ ಕಾರ್ಯಾಲಯಗಳಿಗೆ ನಿತ್ಯ ಪಾದಯಾತ್ರೆ ನಡೆಸುತ್ತಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್‌ಗಾಗಿ ಈ ಬಾರಿ ತೀವ್ರ ಪೈಪೋಟಿ ನಡೆಯುತ್ತಿದೆ. ಆಕಾಂಕ್ಷಿಗಳು ಹಗಲಿರುಳು ಇದಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.
ರೋಣ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡಗಳಿದ್ದು, ಯಾವ ವಾರ್ಡ್‌ನಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು, ಗೆಲ್ಲುವ ಅಭ್ಯರ್ಥಿ ಯಾರು ಎನ್ನುವುದನ್ನು ಗುರುತಿಸುವುದು ಪಕ್ಷದ ಮುಖಂಡರಿಗೆ ಸವಾಲಾಗಿದೆ. ಟಿಕೆಟ್‌ ಹಂಚಿಕೆ ನಿರ್ಧಾರಕ್ಕಾಗಿ ಹಲವು ಸುತ್ತಿನ ಗುಪ್ತ ಸಭೆಗಳು ನಡೆದಿವೆ.

ಕಳೆದ ಬಾರಿ ಸ್ಪರ್ಧಿಸಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಈ ಬಾರಿಯೂ ನಮಗೇ ಅವಕಾಶ ಕೊಡಿ ಎಂದು ಮುಖಂಡರ ದುಂಬಾಲು ಬಿದ್ದಿದ್ದಾರೆ.
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇದುವರೆಗೂ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಆ.13 ಅಥವಾ ಆ.14 ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂರು ಪಕ್ಷಗಳ ಆಪ್ತ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ 16 ವಾರ್ಡಗಳ ಮೇಲೆ ಬಿಜೆಪಿ ಕಣ್ಣು
ಕಳೆದ ಬಾರಿ ಕಾಂಗ್ರೆಸ್ 16 ಸ್ಥಾನಗಳನ್ನು, ಬಿಜೆಪಿ 5 ಸ್ಥಾನಗಳನ್ನು ಗೆದ್ದಿದೆ. ಈ ಬಾರಿ ಶತಾಯ ಗತಾಯ ಪುರಸಭೆಯ ಗದ್ದುಗೆ ಏರಲೇಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಹೀಗಾಗಿ, ಕಾಂಗ್ರೆಸ್‌ನ 16 ವಾರ್ಡ್‌ಗಳ ಮೇಲೆ ಬಿಜೆಪಿಯ ಕಣ್ಣು ಇದೆ. ಪುರಸಭೆ ಆಡಳಿತದ ಚುಕ್ಕಾಣಿಯನ್ನು ಬಿಜೆಪಿಗೆ ಬಿಟ್ಟುಕೊಡದೆ ತಮ್ಮ ಹಿಡಿತದಲ್ಲೇ ಇಟ್ಟುಕೊಳ್ಳಲು ಕಾಂಗ್ರೆಸ್‌ ಸಹ ಪ್ರತಿತಂತ್ರ ಹಣೆದಿದೆ. ಹೀಗಾಗಿ ಅಳೆದೂ ತೂಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.ಅಂತಿಮ ಪಟ್ಟಿ ಬಿಡುಗಡೆಯಾದ ನಂತರವೇ ಸ್ಪಷ್ಟ ಚಿತ್ರಣ ಲಭಿಸಲಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !