ಗದಗ: ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಉಪನಗರದ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ಹಿಂದೂ ಸಮಾಜೋತ್ಸವದ ಶೋಭಾಯಾತ್ರೆಗೆ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಶನಿವಾರ ಚಾಲನೆ ನೀಡಿದರು.

ನಗರದ ವೀರೇಶ್ವರ ಪುಣ್ಯಾಶ್ರಮ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಮಠದಿಂದ ಆರಂಭಗೊಂಡ ಶೋಭಾಯಾತ್ರೆಯು ವೆಂಕಟೇಶ ಟಾಕೀಸ್ ರಸ್ತೆ, ಟ್ಯಾಗೋರ್ ರಸ್ತೆ, ಕಿತ್ತೂರು ರಾಣಿ ಚನ್ನಮ್ಮ ರಸ್ತೆ, ಚೇತನ ಕ್ಯಾಂಟೀನ್, ಹಾತಲಗೇರಿ ನಾಕಾ, ಸಾಯಿಬಾಬಾ ದೇವಸ್ಥಾನದಿಂದ ಮಾಳೇಕೊಪ್ಪಮಠ ಅವರ ಬಯಲು ಜಾಗೆಯವರಿಗೆ ಸಂಚರಿಸಿತು.

ಶೋಭಾಯಾತ್ರೆಯಲ್ಲಿ ನೂರಾರು ಮಹಿಳೆಯರು ಕುಂಭಮೇಳದೊಂದಿಗೆ ಸಾಗಿದ್ದು, ಮೆರುಗು ನೀಡಿತು. ಜತೆಗೆ ವಿವಿಧ ಜಾನಪದ ಕಲಾ ತಂಡಗಳು ಹಾಗೂ ಸಾವಿರಾರು ಜನರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ದೇಶಭಕ್ತಿಗೀತೆಗಳೊಂದಿಗೆ ರಾಷ್ಟ್ರಭಕ್ತರ ಭವ್ಯ ಭಾವಚಿತ್ರದ ಮೆರವಣಿಗೆಯೂ ನಡೆಯಿತು.

ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಭಗವಾಧ್ವಜಗಳು, ದೊಡ್ಡ ಪ್ರಮಾಣದ ಬ್ಯಾನರ್ಗಳಿಂದ ನಗರಕ್ಕೆ ನಗರವೇ ಕೇಸರಿ ಬಣ್ಣದಲ್ಲಿ ಕಂಗೊಳಿಸಿತು.

ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಕೇಶವರಾಮ್ ಕೊಳ್ಳಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಎಸ್.ಪಿ., ಚಿನ್ಮಯಾನಂದ ಟೆಂಗಿನಕಾಯಿ, ಶಶಿಧರ ದಿಂಡೂರ, ರಘುನಾಥಸಾ ಮೇರವಾಡೆ, ರಾಜಣ್ಣ ಮಲ್ಲಾಡದ, ಮಂಜುನಾಥ ಕೊಟ್ನೆಕಲ್, ಚಂದ್ರಕಾಂತ ಚವ್ಹಾಣ, ಪ್ರೇಮಾ ಕಡೆಮನಿ, ಕಾರ್ಯದರ್ಶಿ ಪ್ರಕಾಶ ಉಗಲಾಟದ, ಶೈಲೇಶ್ ಬಾಗಮಾರ, ಹರೀಶ ಪೂಜಾರ, ರಾಜಶೇಖರ ಕುಂಬಿ, ನಾಗವೇಣಿ ಕಟ್ಟಿಮನಿ, ಡಾ. ಉಮೇಶ ಹಾದಿ, ಚಿನ್ಮಯಾನಂದ ಟೆಂಗಿನಕಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.