ಹೊಳೆಆಲೂರು: ‘ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು’ ಎಂದು ರೋಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಹೊಳೆಆಲೂರು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಚಂದ್ರಶೇಖರ ಕಂದಕೂರ ಹೇಳಿದರು.

ಹೊಳೆಆಲೂರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಮಳೆಗಾಲದಲ್ಲಿ ಚರಂಡಿಗಳಲ್ಲಿ ನೀರು ನಿಲ್ಲುವುದು, ಕಸ ಸಂಗ್ರಹವಾಗುವುದು ಹಾಗೂ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮಗಳಲ್ಲಿ ನಿರಂತರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವುದು ಅಗತ್ಯ’ ಎಂದು ತಿಳಿಸಿದರು.

ಗ್ರಾಮದ ಮುಖ್ಯರಸ್ತೆ, ಬೀದಿಗಳು, ಚರಂಡಿಗಳು, ಸಾರ್ವಜನಿಕ ಸ್ಥಳಗಳು ಹಾಗೂ ಕುಡಿಯುವ ನೀರಿನ ಮೂಲಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಡಿಂಗಿ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಬಹುದು. ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ವಚ್ಛತಾ ಕೆಲಸಗಾರರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಸಹಕರಿಸಬೇಕು ಹೇಳಿದರು.

ಸ್ವಚ್ಛತಾ ಕಾರ್ಯಗಳಲ್ಲಿ ತೊಡಗುವ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಗ್ಲೌಸ್, ಬೂಟ್, ಮಾಸ್ಕ್, ಸುರಕ್ಷತಾ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಬೇಕು. ಸುರಕ್ಷತಾ ಕ್ರಮಗಳನ್ನು ಪಾಲಿಸುವುದರಿಂದ ಸೋಂಕು ಹಾಗೂ ಅಪಘಾತಗಳಿಂದ ರಕ್ಷಣೆ ಪಡೆಯಲು ಸಾಧ್ಯವಾಗುತ್ತದೆ ಎಂದರು. .

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ ಮಿಷನ್ ಅನುಷ್ಠಾನ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಕಸ ವಿಂಗಡಣೆ, ಚರಂಡಿಗಳ ನಿರ್ವಹಣೆ, ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.

ಪಿಡಿಒ ಬಸವರಾಜ ಗಿರಿತಮ್ಮಣ್ಣವರ ಅವರು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸ್ವಚ್ಛತಾ ಕೆಲಸಗಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿಯಮಿತವಾಗಿ ಕೈಗೊಳ್ಳುವುದು, ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-7928246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.