ಲಕ್ಷ್ಮೇಶ್ವರ (ಗದಗ ಜಿಲ್ಲೆ): ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ತಾಲ್ಲೂಕಿನ ಬಾಲೆಹೊಸೂರು ಸಮೀಪ ಭಾನುವಾರ ನಡೆದಿದೆ.
ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದರಿಂದ ಗಲಿಬಿಲಿಗೊಂಡ ವಿದ್ಯಾರ್ಥಿಗಳು, ಶಿಕ್ಷಕರು ದಿಕ್ಕಾಪಾಲಾಗಿ ಓಡಿದರು. ಘಟನೆಯಲ್ಲಿ 15ರಿಂದ 20 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹೆಜ್ಜೇನು ಕಡಿದಿದ್ದು, ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.