ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಜಿಲ್ಲಾಡಳಿತ ಭವನದ ಹಿಂಭಾಗದಲ್ಲಿ ನಿರ್ಮಿಸಲಾದ ವಸತಿಗೃಹಗಳನ್ನು ಉದ್ಘಾಟಿಸಿದರು.
2021–22ನೇ ಸಾಲಿನ ಜಿಲ್ಲಾ ಪಂಚಾಯಿತಿ ಕಚೇರಿ ಕಟ್ಟಡಗಳ ನಿರ್ಮಾಣ ಮತ್ತು ನಿರ್ವಹಣೆ ಯೋಜನೆಯಡಿ ಗ್ರೂಪ್ ಸಿ, ಡಿ ನೌಕರರಿಗೆ 1800 ಚದರ ಮೀಟರ್ ವಿಸ್ತೀರ್ಣದಲ್ಲಿ ಒಟ್ಟು ₹ 86 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ನಾಲ್ಕು ಮನೆಗಳನ್ನು ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗಿತ್ತು.
ಈ ವಸತಿಗೃಹ ಲೋಕಾರ್ಪಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಇದ್ದರು.