ಲಕ್ಷ್ಮೇಶ್ವರ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹಾಗೂ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸುವ ಮೂಲಕ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಗ್ರೇಡ್ 2 ತಹಶೀಲ್ದಾರ್ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.

‘ಜಿಮ್ಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ವರದಿಯಾಗಿದೆ. ಹಿಂದೂ ಯುವತಿಯರೊಂದಿಗೆ ಸ್ನೇಹ ಬೆಳೆಸಿ, ಅವರ ಮೇಲೆ ಅತ್ಯಾಚಾರ ಎಸಗಿ, ಅದರ ಫೋಟೊ ಮತ್ತು ವಿಡಿಯೊಗಳ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಒತ್ತಾಯ ಸಹ ಮಾಡಲಾಗುತ್ತಿದೆ’ ಎಂದು ಕಾರ್ಯಕರ್ತರು ಆರೋಪಿಸಿದರು.

‘ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಪ್ರದೇಶಗಳಲ್ಲಿ ಜಾಲವೊಂದು ಇಂತಹ ಕೃತ್ಯಗಳಲ್ಲಿ ತೊಡಗಿಕೊಂಡಿದೆ. ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡ ಸಂಘಟಿತ ಸಂಚು ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಬೇಕು. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಶಂಕ್ರಣ್ಣ ಬಾಡಗಿ, ಶಾಂತಾಬಾಯಿ ಹುಲಕೋಟಿ, ಮಲ್ಲಮ್ಮ ಕಮಗೊಳ್ಳಿ, ಮಾಲಾ ತಹಶೀಲ್ದಾರ, ಶಿವಾನಂದ ಹುಲಕೋಟಿ, ಅರುಣ ಮೆಕ್ಕಿ, ಎಫ್.ವಿ. ಪಾಟೀಲ, ಸಿ.ಸಿ. ಹುಬ್ಬಳ್ಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-23-630950939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.