ಗುರುವಾರ , ಜೂನ್ 30, 2022
23 °C

ಸುಧಾಮೂರ್ತಿಗೆ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ನೀಡುವ 2022ನೇ ಸಾಲಿನ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ಗೆ ಇನ್ಫೋಸಿಸ್‍ನ ಸುಧಾಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ಹೇಳಿದ್ದಾರೆ.

ಡಾ. ಸುಧಾಮೂರ್ತಿ ಅವರ ಸಾಮಾಜಿಕ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗದುಗಿನ ತೋಂಟದಾರ್ಯ ಮಠದಲ್ಲಿ ಮೇ 2ರಂದು ನಡೆಯುವ ಕಾರ್ಯಕ್ರಮದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಡಾ.ಸುಧಾಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು ₹1 ಲಕ್ಷ ನಗದು, ತಾಮ್ರಫಲಕ ಒಳಗೊಂಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.