ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮೇಶ್ವರ | ‘ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಕಡೆಗಣನೆ’

Published 4 ಮೇ 2024, 16:00 IST
Last Updated 4 ಮೇ 2024, 16:00 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ತಾಲ್ಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ಶನಿವಾರ ಶಾಸಕ ಡಾ.ಚಂದ್ರು ಲಮಾಣಿ ಅವರು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ನೆಪದಲ್ಲಿ ರಾಜ್ಯದ ಅಭಿವೃದ್ಧಿಯನ್ನೇ ಕಡೆಗಣಿಸಿದೆ. ಹತ್ತು ತಿಂಗಳು ಕಳೆದರೂ ಅಭಿವೃದ್ಧಿ ಕೆಲಸಗಳಿಗೆ ನಯಾಪೈಸೆ ಅನುದಾನ ನೀಡಿಲ್ಲ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಸಂಪೂರ್ಣ ಮರೆತು ವಿನಾಕಾರಣ ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸುತ್ತಿದೆ’ ಎಂದು ದೂರಿದರು.

‘ಸಿದ್ಧರಾಮಯ್ಯನವರ ಸರ್ಕಾರ ತನ್ನ ಹುಳುಕನ್ನು ಮುಚ್ಚಿಕೊಳ್ಳಲು ತಂತ್ರ ಹೂಡುತ್ತಿದೆ. ಗ್ಯಾರಂಟಿಗಳಿಗೆ ಮತದಾರರು ಮರುಗಳಾಗುವುದಿಲ್ಲ. ಅವರಿಗೆ ದೇಶದ ಭದ್ರತೆ ಮತ್ತು ಪ್ರಗತಿ ಮುಖ್ಯ. ಅವರು ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT