ಬುಧವಾರ, ಜನವರಿ 27, 2021
18 °C

ಅಕ್ರಮ ಪಡಿತರ ಅಕ್ಕಿ ಸಾಗಣೆ: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಗದಗ ಗ್ರಾಮೀಣ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಶನಿವಾರ 112 ತುರ್ತು ಸಹಾಯವಾಣಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ನೀಡಿದ ಮಾಹಿತಿಯಂತೆ ಇಆರ್‌ವಿ ತಂಡದವರು ಎಸ್‌ಪಿ ಯತೀಶ್‌ ಎನ್‌. ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಾಚರಣೆಗೆ ಇಳಿದು, ನಗರದ ಹೊರವಲಯದಲ್ಲಿರುವ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ವಾಹನವನ್ನು ವಶಕ್ಕೆ ಪಡೆದು ಗ್ರಾಮೀಣ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಾಹನದಲ್ಲಿ 50 ಕೆ.ಜಿ.ಯ 80 ಚೀಲ ಪಡಿತರ ಅಕ್ಕಿ ಇತ್ತು. ಈ ವೇಳೆ ಪೊಲೀಸರು ವಾಹನದ ಚಾಲಕ ಸಿದ್ದಲಿಂಗಯ್ಯ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು