ಬಂಜಾರ ಸಮಾಜವು ಈ ಹಿಂದಿನ ಬಿಜೆಪಿ ಸರ್ಕಾರ ಬಹಿಷ್ಕರಿಸಿ ಸಂಪೂರ್ಣ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿತು. ಆದರೂ ಈ ಸರ್ಕಾರ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದೆ
ಡಾ.ಚಂದ್ರು ಲಮಾಣಿ ಶಾಸಕ
ಸರ್ಕಾರದ ಒಳಮೀಸಲಾತಿ ವರ್ಗೀಕರಣವು ಅವೈಜ್ಞಾನಿಕವಾಗಿದೆ. ಅಲ್ಲದೇ ಬಂಜಾರ ಸಮಾಜದ ಶಿಕ್ಷಣ ಉದ್ಯೋಗ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯ ಅಂಕಿ ಅಂಶಗಳು ವಾಸ್ತವಿಕತೆಗೆ ದೂರವಾಗಿವೆ
ಕೆ.ಬಿ.ಅಶೋಕ ನಾಯ್ಕ ಮಾಜಿ ಶಾಸಕ
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವುದನ್ನು ಬಿಟ್ಟು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವಂತೆ ಕಾಂಗ್ರೆಸ್ ಸರ್ಕಾರ ಬಂಜಾರ ಜನಾಂಗಕ್ಕೆ ಕಡಿಮೆ ಮೀಸಲಾತಿ ನೀಡಿ ಅನ್ಯಾಯ ಮಾಡಿದೆ
ಸುಭಾಶ ರಾಠೋಡ ನಿವೃತ್ತ ನ್ಯಾಯಾಧೀಶ
ತಾಂಡಾ ಜನರು ಅನ್ಯ ರಾಜ್ಯಗಳಿಗೆ ಹೊಟ್ಟೆಪಾಡಿಗಾಗಿ ವಲಸೆ ಹೋಗುತ್ತಾರೆ. ಆದರೂ ಈ ಸರ್ಕಾರ ನಮ್ಮ ಸಮಾಜದ ಜನರಿಗೆ ಮರಣ ಶಾಸನ ವಿಧಿಸಿ ಮತ್ತೇ 50 ವರ್ಷಗಳಷ್ಟು ಹಿಂದಕ್ಕೆ ದೂಡಿದೆ