ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದುಗಿನ ಮಗನನ್ನು ಗೆಲ್ಲಿಸಿ: ಶೆಟ್ಟರ್‌

ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್‌.ವಿ.ಸಂಕನೂರ ಪರ ಸಚಿವರ ಪ್ರಚಾರ
Last Updated 18 ಅಕ್ಟೋಬರ್ 2020, 7:33 IST
ಅಕ್ಷರ ಗಾತ್ರ

ಗದಗ: ‘ಮೊದಲ ಪ್ರಾಶಸ್ತ್ಯದ ಮತವನ್ನು ಸಂಕನೂರ ಅವರಿಗೆ ಕೊಡುವ ಮೂಲಕ ಗದುಗಿನ ಮಗನನ್ನು ಗೆಲ್ಲಿಸಲು ಸಹಕರಿಸಬೇಕು. ಅವರು ಗೆದ್ದು ಬಂದರೆ, ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗುವುದರ ಜತೆಗೆ ವಿಧಾನ ಪರಿಷತ್‌ನಲ್ಲೂ ಪಕ್ಷದ ಬಲ ಹೆಚ್ಚುತ್ತದೆ’ ಎಂದು ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಗದಗ ನಗರದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಪಶ್ಚಿಮ ಪದವೀಧರ ಮತಕ್ಷೇತ್ರದ ವ್ಯಾಪ್ತಿಗೆ ನಾಲ್ಕು ಜಿಲ್ಲೆಗಳು, 23 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಅದರಲ್ಲಿ, 19 ಮಂದಿ ಬಿಜೆಪಿ ಶಾಸಕರು ಹಾಗೂ ಸಂಸದರು ಇದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಸಂಕನೂರ ಅವರು ಗೆದ್ದಾಗ ನಮ್ಮ ಸರ್ಕಾರ ಇರಲಿಲ್ಲ. ಆದರೂ ಅವರು 14 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಅವರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ವಿಧಾನಪರಿಷತ್‌ ಸದಸ್ಯನಾಗಿದ್ದ ಸಂದರ್ಭದಲ್ಲಿ ಪದವೀಧರರ ಸಮಸ್ಯೆಗಳಿಗೆ ಮಾತ್ರ ಸ್ಪಂದಿಸದೇ, 35 ಇಲಾಖೆಗಳಲ್ಲಿರುವ ಸಮಸ್ಯೆಗಳ ಬಗ್ಗೆಯೂ ಸದನದಲ್ಲಿ ಧ್ವನಿ ಎತ್ತಿದ್ದೇನೆ. ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ವಿ.ಸಂಕನೂರ ಹೇಳಿದರು.

‘ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದು, ಮೊದಲ ಅವಧಿಯಲ್ಲಿ ಮಾಡಿದ ಕೆಲಸವನ್ನು ಎರಡು ಪುಸ್ತಕಗಳ ರೂಪದಲ್ಲಿ ಹೊರತಂದಿದ್ದೇನೆ ’ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಗದಗ ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಆನಂದ್‌ ಪೋತ್ನಿಸ್‌, ಮುಖಂಡರಾದ ಅನಿಲ್‌ ಮೆಣಸಿನಕಾಯಿ, ಮೋಹನ ಮಾಳಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT