ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನೆ

ಜ.11ರಿಂದ ಐದು ಹಂತಗಳಲ್ಲಿ ರಾಜ್ಯದಾದ್ಯಂತ ಜನಸೇವಕ ಸಮಾವೇಶ
Last Updated 9 ಜನವರಿ 2021, 16:57 IST
ಅಕ್ಷರ ಗಾತ್ರ

ಗದಗ: ‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಜ.11ರಂ4ದು ‘ಜನಸೇವಕ ಸಮಾವೇಶ’ ಆಯೋಜಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ ಮಾಳಶೆಟ್ಟಿ ಹೇಳಿದರು.

ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರ ಕೇಂದ್ರಿತ ಪಕ್ಷ ಎಂಬ ಆಪಾದನೆ ಮಾಡುತ್ತಿದ್ದ ವಿರೋಧ ಪಕ್ಷಗಳಿಗೆ ಗ್ರಾಮೀಣ ಜನ ತಕ್ಕ ಉತ್ತರ ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತರನ್ನು ಗೆಲ್ಲಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಗ್ರಾಮ ಪಂಚಾಯ್ತಿಗಳ ಸಶಕ್ತೀಕರಣಕ್ಕೆ 15ನೇ ಹಣಕಾಸು ಯೋಜನೆಯಡಿ ನೇರ ಅನುದಾನ ಬಿಡುಗಡೆ ಯೋಜನೆಗೆ ಶಕ್ತಿ ತುಂಬಿದ್ದಾರೆ’ ಎಂದು ಹೇಳಿದರು.

‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರನ್ನು ಅಭಿನಂದಿಸಲು ರಾಜ್ಯ ಬಿಜೆಪಿ ಜ.11ರಿಂದ ಐದು ಹಂತಗಳಲ್ಲಿ ರಾಜ್ಯದಾದ್ಯಂತ ಜನಸೇವಕ ಸಮಾವೇಶ ನಡೆಸುತ್ತಿದ್ದು, ಮೊದಲ ಸಮಾವೇಶ ಜ.11 ರಂದು ಮೈಸೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದರು.

‘ಗದುಗಿನಲ್ಲಿ ಅದೇ ದಿನ ಮಧ್ಯಾಹ್ನ 3ಕ್ಕೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಜನಸೇವಕ ಸಮಾವೇಶ ನಡೆಯಲಿದ್ದು, ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಚಿವರಾದ ರಮೇಶ ಜಾರಕಿಹೊಳಿ, ವಿ. ಸೋಮಣ್ಣ, ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜಗೌಡ, ಭಾರತಿ ಮಗದುಂ, ಎಸ್‍ಟಿ ಮೋರ್ಚಾದ ಅಧ್ಯಕ್ಷ ತಿಪ್ಪರಾಜ ಹವಾಲ್ದಾರ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಮುಖಂಡರಾದ ಅನಿಲ ಮೆಣಸಿನಕಾಯಿ, ಸಂಸದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ ಸೇರಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸುವರು’ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂಗಮೇಶ ದುಂದೂರ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧವ ಗಣಾಚಾರಿ, ಮುತ್ತಣ್ಣ ಲಿಂಗನಗೌಡ್ರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರಾಜು ಕುರಡಗಿ, ಭೀಮಸಿಂಗ್ ರಾಠೋಡ, ಎಂ.ಎಸ್.ಕರಿಗೌಡ್ರ ಸೇರಿ ಇದ್ದರು.

65 ಕಡೆ ಬಿಜೆಪಿ ಬೆಂಬಲಿತರೇ ಅಧಿಕಾರ

‘ರಾಜ್ಯದ 86,133 ಗ್ರಾಮ ಪಂಚಾಯ್ತಿ ಸದಸ್ಯರ ಪೈಕಿ 45,246 (ಶೇ 52.4) ಮಂದಿ ಬಿಜೆಪಿ ಬೆಂಬಲಿತರಿದ್ದಾರೆ’ ಎಂದು ಮೋಹನ ಮಾಳಶೆಟ್ಟಿ ತಿಳಿಸಿದರು.

‘ಒಟ್ಟು 5,670 ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರು 3,142 (ಶೇ 55.4) ಗ್ರಾಮ ಪಂಚಾಯ್ತಿಗಳಲ್ಲಿ ಆಡಳಿತ ನಡೆಸಲಿದ್ದಾರೆ. ಜಿಲ್ಲೆಯ 116 ಗ್ರಾಮ ಪಂಚಾಯ್ತಿಗಳಲ್ಲಿ 65 ಕಡೆ ಬಿಜೆಪಿ ಬೆಂಬಲಿತರೇ ಅಧಿಕಾರ ನಡೆಸಲಿದ್ದಾರೆ. ಹತ್ತಿರತ್ತಿರ ಸಾವಿರ ಮಂದಿ ಗ್ರಾಮ ಪಂಚಾಯ್ತಿ ಸದಸ್ಯರು ಬಿಜೆಪಿ ಬೆಂಬಲಿತರಿದ್ದಾರೆ. ಯಾವುದೇ ಪಕ್ಷದ ಬೆಂಬಲವಿಲ್ಲದೇ ಚುನಾಯಿತರಾಗಿರುವ ಪಕ್ಷೇತರರು ಕೂಡ ಬಿಜೆಪಿ ಬೆಂಬಲಿಸಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT