ಶನಿವಾರ, ಸೆಪ್ಟೆಂಬರ್ 25, 2021
22 °C

ಜನಸಂಖ್ಯಾ ದಿನಾಚರಣೆ: ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದುಗಿನ ನಗರಸಭೆ ಪದವಿಪೂರ್ವ ಕಾಲೇಜು ಆವರಣದಲ್ಲಿ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಾಸಣ್ಣ ಕುರಡಗಿ ಚಾಲನೆ ನೀಡಿದರು

ಗದಗ: ಇಲ್ಲಿನ ನಗರಸಭೆ ಪದವಿಪೂರ್ವ ಕಾಲೇಜು ಆವರಣದಲ್ಲಿ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ವಾಸಣ್ಣ ಕುರಡಗಿ ಚಾಲನೆ ನೀಡಿದರು.

‘ಜನಸಂಖ್ಯೆ ಹೆಚ್ಚಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ನೀಡಲು ಸಾಧ್ಯವಾಗುವುದಿಲ್ಲ. ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಬೇಕಿದೆ’ ಎಂದು ಅವರು ಹೇಳಿದರು. ‘ಜನಸಂಖ್ಯೆ ಹೆಚ್ಚಿದರೆ, ಅಗತ್ಯಕ್ಕಿಂತ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಹೊರೆಯಾಗುತ್ತದೆ. ದೇಶದ ಸುಸ್ಥಿರ ಪ್ರಗತಿಯ ದೃಷ್ಟಿಯಿಂದ ಜನಸಂಖ್ಯೆ ನಿಯಂತ್ರಣದಲ್ಲಿ ಇರಬೇಕು’ ಎಂದು ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎಸ್.ಸಿ.ಮಹೇಶ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಲ್ಲೇದ, ಡಾ.ಅರುಂಧತಿ ಕುಲಕರ್ಣಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ.ಭಜಂತ್ರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಸುರೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.