ಲಕ್ಷ್ಮೇಶ್ವರ: ಪಟ್ಟಣದ ಇತಿಹಾಸ ಪ್ರಸಿದ್ಧ ಸೋಮೇಶ್ವರ ದೇವರ ಜಾತ್ರಾ ಮಹೋತ್ಸವ ಮೇ 6ರಿಂದ 9ರ ವರೆಗೆ ನಡೆಯಲಿದೆ. ಈ ಕುರಿತು ಶನಿವಾರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ನ ನಿಕಟಪೂರ್ವ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಮಾತನಾಡಿ, ‘ಪ್ರತಿವರ್ಷದಂತೆ ಈ ವರ್ಷವೂ ಕೂಡ ಸೋಮೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ’ ಎಂದರು.

‘ಮೇ 6ರಂದು ಸಂಜೆ 6ಕ್ಕೆ ಉಡಿ ತುಂಬುವುದು, 7ರಂದು ಸಂಜೆ ಮಹಾರಥೋತ್ಸವ, 8ರಂದು ಕಡುಬಿನ ಹಾಗೂ 9ರಂದು ರಾತ್ರಿ 8ಕ್ಕೆ ಓಕಳಿ ಕಾರ್ಯಕ್ರಮ ನಡೆಯಲಿದೆ. ಜಾತ್ರೆಗೆ ನಾಡಿನ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಭಕ್ತರಿಗೆ ಕುಡಿಯುವ ನೀರಿನ ಸೌಲಭ್ಯ ಮಾಡಲಾಗಿದೆ. ಸ್ವಚ್ಛತೆಗೆ ಆಧ್ಯತೆ ನೀಡಲಾಗಿದ್ದು, ಎಲ್ಲರೂ ಸೇರಿ ಜಾತ್ರೆಯನ್ನು ಯಶಸ್ವಿಗೊಳಿಸೋಣ’ ಎಂದರು.

ಸೋಮೇಶ್ವರ ದೇವಸ್ಥಾನದ ಅರ್ಚಕರ ಸಮಿತಿ ಅಧ್ಯಕ್ಷ ವಿ.ಎಲ್. ಪೂಜಾರ ಮಾತನಾಡಿ, ‘ಭಕ್ತರಿಗೆ ಅನುಕೂಲವಾಗಲಿ ಎಂಬ ಉದ್ಧೇಶದಿಂದ ಈ ಬಾರಿ ಪೂರ್ವ ದ್ವಾರದಿಂದ ಭಕ್ತರು ಗರ್ಭ ಗುಡಿ ಪ್ರವೇಶಿಸಿ ದೇವರ ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಭಕ್ತರು ಸಹಕರಿಸಬೇಕು’ ಎಂದರು.

ಜಾತ್ರಾ ಸಮಿತಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ, ಸೋಮೇಶ್ವರ ಭಕ್ತರ ಸೇವಾ ಸಮಿತಿಯ ನೂತನ ಅಧ್ಯಕ್ಷ ಗುರುರಾಜ ಪಾಟೀಲ ಕುಲಕರ್ಣಿ, ಪೂರ್ಣಾಜಿ ಖರಾಟೆ ಮಾತನಾಡಿದರು. ಸಿದ್ದನಗೌಡ ಬಳ್ಳೊಳ್ಳಿ, ಸುರೇಶ ರಾಚನಾಯ್ಕರ್, ಶಿವಯೋಗಿ ಅಂಕಲಕೋಟಿ, ಅಪ್ಪಣ್ಣ ಮುಳಗುಂದ, ಮಯೂರಗೌಡ ಪಾಟೀಲ, ಎನ್.ಆರ್. ಸಾತಪುತೆ, ರಾಘು ಪೂಜಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.