ಗದಗ: ‘ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆದಿರುವ ಯುದ್ಧದಿಂದಾಗಿ ಇಂಧನ ಹಾಗೂ ಅಡುಗೆ ಅನಿಲಗಳ ಕೊರತೆ ಉಂಟಾಗಿದೆ. ಇದರ ನಡುವೆಯೂ ದೇಶದಲ್ಲಿ ಸಮತೋಲನವನ್ನು ಕಾಯ್ದುಕೊಂಡು ಇಂಧನ ಹಾಗೂ ಅಡುಗೆ ಅನಿಲಗಳನ್ನು ಪೂರೈಸುತ್ತಿರುವ ಕೇಂದ್ರ ಸರ್ಕಾರದ ಕಾರ್ಯ ಶ್ಲಾಘನೀಯ’ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ತಿಳಿಸಿದ್ದಾರೆ.

‘ಯುದ್ಧದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಅಡುಗೆ ಅನಿಲಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಸಹಜವಾಗಿಯೇ ದೇಶದಲ್ಲಿ ಕೂಡ ಅಡುಗೆ ಅನಿಲಗಳ ಬೆಲೆ ಏರಿಕೆ ಆಗಿದೆ. ವಸ್ತುಸ್ಥಿತಿ ಹೀಗಿರುವಾಗ ಇದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ಜರಿದಿದ್ದಾರೆ.

‘ಹಿಂದೆ ಜಿಎಸ್ಟಿ ಕಡಿಮೆ ಮಾಡಿದಾಗ ಎಲ್ಲ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿನಾಕಾರಣ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ ಒಂದು ರೂಪಾಯಿ ಹಾಗೂ ತುಪ್ಪದ ದರವನ್ನು ಕೆ.ಜಿ.ಗೆ ₹90 ಏರಿಕೆ ಮಾಡಿ ಜನರಿಗೆ ಹೊರೆ ಮಾಡಿದೆ. ಆದರೆ, ಈಗ ಪೆಟ್ರೋಲಿಯಂ ಬೆಲೆಗಳ ಏರಿಕೆ ವಿರುದ್ಧ ಟೀಕೆ ಮಾಡುವುದು, ಹೋರಾಟ ಮಾಡುವುದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದ್ದಾರೆ.

‘ಅಂತರರಾಷ್ಟ್ರೀಯ ಸಮಸ್ಯೆಯಿಂದ ಬೆಲೆ ಏರಿಕೆ ಆಗಿದ್ದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದು ತಿರುಗುಬಾಣವಾಗಲಿದೆ’ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.