ನವಲಗುಂದ: ಹುಬ್ಬಳ್ಳಿ-ಧಾರವಾಡ-ಗದಗ-ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರು ಸೇರಿದಂತೆ ಉತ್ತರ ಕರ್ನಾಟಕದ ಅಗತ್ಯ ಬೇಡಿಕೆಯಾಗಿರುವ ಮಹಾದಾಯಿ ಕಳಸಾ-ಬಂಡೂರಿ ಯೋಜನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತುರ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ ಮನೋಜಕುಮಾರ ಅವರಿಗೆ ಬೆಂಗಳೂರಿನಲ್ಲಿ ಕರ್ನಾಟಕ ರೈತ ಸೇನೆಯ ರಾಜ್ಯಾಧ್ಯಕ್ಷ ಶಂಕರಪ್ಪ ಅಂಬಲಿ ಅವರು ಗುರುವಾರ ಒತ್ತಾಯಿಸಿದರು.

‘1976 ರಿಂದ ನಿರಂತರವಾಗಿ ಮಹಾದಾಯಿ ಕಳಸಾಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದರೂ ಇದುವರೆಗೂ ಆರಂಭ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಭಾರತೀಯ ಕಿಸಾನ್ ಸಂಘದ ಗದಗ ಜಿಲ್ಲಾಧ್ಯಕ್ಷ ಎಸ್.ಎಸ್. ಪಾಟಿಲ್, ಗ್ಲೋಬಲ್ ಗ್ರೀನ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರವೀಣ್ ನಾಯಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-1101582325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.