ಗದಗ: ‘ನೂರಾರು ದಾರ್ಶನಿಕರಲ್ಲಿ ಕನಕದಾಸರು ಅಗ್ರಸ್ಥಾನದಲ್ಲಿದ್ದಾರೆ’ ಎಂದು ಸಾಹಿತಿ ಲಿಂಗದಳ್ಳಿ ಹಾಲಪ್ಪ ಹೇಳಿದರು.

ನಗರದ ಕನಕಭವನದಲ್ಲಿ ಬೆಂಗಳೂರಿನ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ನಡೆದ ‘ಕನಕ ಸಾಹಿತ್ಯ ಸಂಭ್ರಮ’ದ 100ನೇ ಉಪನ್ಯಾಸದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಕನಕದಾಸರ 500ನೇ ಜಯಂತಿವರೆಗೂ ಅವರ ಸಾಹಿತ್ಯದ ಬಗ್ಗೆ ಅಷ್ಟೊಂದು ಪ್ರಚಾರ ಇರಲಿಲ್ಲ. ಕನಕದಾಸರ ಬಗ್ಗೆ ಪಠ್ಯದಲ್ಲಿ ಅಳವಡಿಸಿರಲಿಲ್ಲ. 500ನೇ ಜಯಂತಿ ನಂತರ ಕನಕದಾಸರ ಕೀರ್ತನೆಗಳು, ಮುಂಡಿಗೆಗಳು ಬೆಳಕಿಗೆ ಬಂದವು’ ಎಂದು ಹೇಳಿದರು.

ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಶಾಸ್ತ್ರ ವಿಭಾಗದ ಪ್ರೊ. ಎಫ್.ಟಿ. ಹಳ್ಳಿಕೇರಿ ಮಾತನಾಡಿ, ‘ಸಂಘಟನೆ, ಶ್ರದ್ಧೆ, ಶ್ರಮದಿಂದ 100ನೇ ಮಾಲಿಕೆ ಸಾಧ್ಯವಾಗಿದೆ. ಹಾಲುಮತ ಸಮಾಜದ ಅಭಿವೃದ್ಧಿಗೆ ಗದಗ ಜಿಲ್ಲೆ ಸಾಕಷ್ಟು ಕೊಡುಗೆ ನೀಡಿದೆ’ ಎಂದರು.

‘ಹಾಲುಮತ ಚರಿತ್ರೆಯನ್ನು ಬೆಳಿಕಿಗೆ ತಂದ ವಿ.ಆರ್. ಹನಮಂತಯ್ಯ ಅವರನ್ನು ಹಾಲುಮತ ಪಿತಾಮಹ ಎಂದು ಕರೆಯಬಹುದು. ಕನ್ನಡ ವಿಶ್ವವಿದ್ಯಾಲಯ ಪುಸ್ತಕ ಪ್ರಕಟನೆ ಮಾಡಿದೆ. ಸಂತ ಪ್ರತಿಷ್ಠಾನ ಆರಂಭಿಸಲಾಗಿದೆ. ಮನೆ ಮನೆಗೂ ಕನಕದಾಸರ ಸಾಹಿತ್ಯ ತಲುಪಿಸಬೇಕಿದೆ’ ಎಂದರು.

ಪ್ರೊ. ಸುಧಾ ಕೌಜಗೇರಿ ಮಾತನಾಡಿ, ‘ಕನಕದಾಸರು ಸಾಹಿತ್ಯ ಕ್ಷೇತ್ರದಲ್ಲಿ ನಕ್ಷತ್ರದಂತೆ ಮಿನುಗುತ್ತಿದ್ದಾರೆ. ಕನಕದಾಸರು ಸಂತ, ಭಕ್ತ, ಕವಿ ಅಲ್ಲದೆ ಅವರೊಬ್ಬ ಮಹಾನ್ ಹೋರಾಟಗಾರರು’ ಎಂದು ಹೇಳಿದರು.

ಚಿಂತಕ ಮಂಜುನಾಥ ಹೊನ್ನನವರ ಮಾತನಾಡಿ, ‘ಮನುಷ್ಯ ಅಹಂಕಾರ ಬಿಡಬೇಕು. ಮನುಕುಲಕ್ಕೆ ಶಾಂತಿಮಂತ್ರ ನೀಡಿದ ಕೀರ್ತಿ ಕನಕದಾಸರಿಗೆ ಸಲ್ಲುತ್ತದೆ’ ಎಂದರು.

ಡಾ. ಹನಮಗೌಡ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುರೇಶ ಕೊಪ್ಪದ, ವಾಸಣ್ಣ ಕುರಡಗಿ, ರವಿ ದಂಡಿನ, ಪ್ರಕಾಶ ಕರಿ ಮಾತನಾಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸಿದ್ದರು.

ರಾಜಶೇಖರ ಕಲ್ಲೂರ, ಡಿಡಿಪಿಐ ಆರ್.ಎಸ್.ಬುರಡಿ, ರಾಮಕೃಷ್ಣ ರೊಳ್ಳಿ, ನಿಂಗಪ್ಪ ಸವಣೂರ, ಮಹಾಂತೇಶ ನಿಟ್ಟಾಲಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಶ್ರದ್ಧಾ ಕಬಾಡಿ, ಇಶಾ ಗಣಾಚಾರಿ ಅವರಿಂದ ಭರತನಾಟ್ಯ ಜರುಗಿತು. ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನಕದಾಸರ ಸಾಹಿತ್ಯ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ 76ರಿಂದ 100ನೇ ಆನ್ಲೈನ್ ಗೂಗಲ್ ಮೀಟ್ನಲ್ಲಿ ಕನಕದಾಸರ ಸಾಹಿತ್ಯದ ಉಪನ್ಯಾಸ ನೀಡಿದವರನ್ನು ಸನ್ಮಾನಿಸಲಾಯಿತು.

ಸಮಿತಿಯ ರಾಜ್ಯ ಸಮನ್ವಯಾಧಿಕಾರಿ ಕೃಷ್ಣ ಖಾನಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಮಾರುತಿ ಮಡ್ಡಿ ಸ್ವಾಗತಿಸಿದರು. ಆರ್.ಜಿ.ಕೊರ್ಲಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಬಸವರಾಜ ಕೆರಿ ವಂದಿಸಿದರು.

‘ಕನಕ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮವನ್ನು ಸಂಘಟಿಸುವುದರ ಹಿಂದೆ ಸಾಕಷ್ಟು ಜನರ ಶ್ರಮವಿದೆ. ಎಲ್ಲರೂ ಮುಂದಿನ ದಿನಗಳಲ್ಲಿ ಕನಕದಾಸ ಸಾಹಿತ್ಯವನ್ನು ಇನ್ನಷ್ಟು ಜನರಿಗೆ ಪರಿಚಯಿಸಬೇಕಿದೆ
–ರುದ್ರಣ್ಣ ಗುಳಗುಳಿ ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.