ಗದಗ: ‘ಜಿಲ್ಲೆಯಲ್ಲಿ ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದರು.

‘ನ.1ರಂದು ಬೆಳಿಗ್ಗೆ 7.30ಕ್ಕೆ ಗದಗ– ಬೆಟಗೇರಿ ನಗರಸಭೆ ಪದವಿಪೂರ್ವ ಕಾಲೇಜು ಆವರಣದಿಂದ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿದ ನಂತರ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ 9ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು’ ಎಂದರು.

‘ಪೊಲೀಸ್ ಪಡೆ, ಗೃಹರಕ್ಷಕದಳ, ಭಾರತ ಸೇವಾದಳಗಳಿಂದ ಪಥ ಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮವಹಿಸಬೇಕು. ಶಿಷ್ಟಾಚಾರದ ಅನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ– ಕಾಲೇಜು ವಿದ್ಯಾರ್ಥಿಗಳು, ಸಂಘ–ಸಂಸ್ಥೆಯವರು ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಜಿ., ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ವಿವಿಧ ರಂಗಗಳ ಸಾಧಕರಿಗೆ ನಡೆಯುವ ಸನ್ಮಾನ ಸಮಾರಂಭವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು
ಡಾ. ದುರಗೇಶ್ ಕೆ.ಆರ್. ಎಡಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.