ಗದಗ: ‘ದಕ್ಷಿಣ ಭಾರತದಲ್ಲಿ ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಮುಖ್ಯಕಾರಣ ಬಿ.ಎಸ್.ಯಡಿಯೂರಪ್ಪನವರು. ಕರ್ನಾಟಕ ರಾಜ್ಯಕ್ಕೆ ಬಿಎಸ್ವೈ ಸ್ಮರಣೀಯ ಸೇವೆ ನೀಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಾದ್ಯಂತ ಸೈಕಲ್ ಮೂಲಕ ಬಿಜೆಪಿ ಪಕ್ಷವನ್ನು ಬಲಪಡಿಸಿ ಜನಸೇವೆ ಮಾಡಿ, ಇದೀಗ 50 ವರ್ಷ ತುಂಬಿರುವ ಪ್ರಯುಕ್ತ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವಕ್ಕೆ ಗದಗ ನಗರದಿಂದ ಚಿತ್ರದುರ್ಗಕ್ಕೆ ಸೈಕಲ್ ಮೂಲಕ ಹೊರಟ ಪ್ರಭು ಡಿಗ್ಗಾವಿ ಅವರಿಗೆ ಬೀಳ್ಕೊಡುಗೆ ನೀಡಿ ಮಾತನಾಡಿದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸುಧೀರ್ ಕಾಟಿಗರ ಅವರ ಅಭಿಮಾನಿಯಾದ ಗದುಗಿನ ಯುವಕ ಪ್ರಭು ಡಿಗ್ಗಾವಿ ಅವರು ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸೈಕಲ್ ಮುಖಾಂತರ ಹೊರಟಿದ್ದು ಅವರ ಜನಜಾಗೃತಿ ಪ್ರಯಾಣ ಶುಭಕರವಾಗಲಿ’ ಎಂದು ಆಶಿಸಿದರು.

ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿ, ‘ಮೇ 9ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಭಾಗವಹಿಸುವರು. ಅದೇರೀತಿ ಗದಗ ಜಿಲ್ಲೆಯಿಂದಲೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಧೀರ್ ಕಾಟಿಗರ ಮಾತನಾಡಿ, ‘ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿದೆ. ಅವರ ಅಭಿಮಾನಿಗಳು ಚಿತ್ರದುರ್ಗಕ್ಕೆ ತಂಡೋಪ ತಂಡವಾಗಿ ಬರಲಿದ್ದಾರೆ’ ಎಂದರು.

‘ಈಗಿನ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೂಡ ಗದಗ ಜಿಲ್ಲೆಯಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಅಭಿಮಾನಿಯಾದ ಗದಗ ತಾಲ್ಲೂಕಿನ ಕುರ್ತಕೋಟಿ ಗ್ರಾಮದ ಯುವಕ ಪ್ರಭು ಡಿಗ್ಗಾವಿ ಸೈಕಲ್ ಮುಖಾಂತರ ಚಿತ್ರದುರ್ಗಕ್ಕೆ ಹೊರಟಿದ್ದಾರೆ’ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ್ ಪಾಟೀಲ, ಮಂಡಲ ಅಧ್ಯಕ್ಷ ಸುರೇಶ್ ಮರಳಪ್ಪನವರ, ಶಂಕರ ಕಾಕಿ, ಅನಿಲ ಅಬ್ಬಿಗೇರಿ, ರಮೇಶ್ ಸಜ್ಜಗಾರ, ಜಯಶ್ರೀ ಉಗಲಾಟದ, ಸಂತೋಷ ಅಕ್ಕಿ, ಬಸವರಾಜ್ ನರೇಗಲ್, ಇರ್ಷಾದ್ ಮಾನ್ವಿ, ರವಿ ಮಾನ್ವಿ, ಮಂಜುನಾಥ್ ಶಾಂತಗೇರಿ, ದೇವೇಂದ್ರಪ್ಪ ಹೂಗಾರ, ಕುಶಾಲ್ ಕಾಟಿಗರ್ ಸೇರಿದಂತೆ ಬಿಜೆಪಿಯ ಕಾರ್ಯಕರ್ತರು ಪದಾಧಿಕಾರಿಗಳು ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-223326356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.