ಗದಗ: ‘ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅರಿವು ಇರುವ ಬಸವರಾಜ ಬೊಮ್ಮಾಯಿ ಈಗ ಮುಖ್ಯಮಂತ್ರಿ ಆಗಿದ್ದು, ಸಮಸ್ಯೆ ಪರಿಹರಿಸಲು ಕ್ರಮವಹಿಸುತ್ತಾರೆ ಎಂಬ ಭರವಸೆ ಇದೆ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶುಕ್ರವಾರ ಗದುಗಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಮಹದಾಯಿ ಸಲುವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಪಾದಯಾತ್ರೆ ಕೂಡ ನಡೆಸಿದ್ದಾರೆ. ಈಗ ಅವರೇ ಮುಖ್ಯಮಂತ್ರಿ ಆಗಿರುವುದರಿಂದ ಇವೆಲ್ಲವಕ್ಕೂ ನ್ಯಾಯ ಸಿಗಲಿದೆ ಎಂದು ನಂಬಿದ್ದೇನೆ’ ಎಂದು ಹೇಳಿದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ಕ್ಯಾಬಿನೆಟ್‌ನಲ್ಲಿ ನಿರ್ಣಯ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಕಡಿಮೆ ಆಗಿದೆ. ಆದರೆ, ಮಳೆಗಾಲ ಆರಂಭಗೊಂಡಿದೆ. ಇವುಗಳ ಸಾಧಕ ಬಾಧಕ ನೋಡಿಕೊಂಡು ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವ ವಿಶ್ವಾಸ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.