ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಒತ್ತು: ಶ್ರೀರಾಮುಲು

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರು
Last Updated 1 ಮಾರ್ಚ್ 2022, 5:14 IST
ಅಕ್ಷರ ಗಾತ್ರ

ಗದಗ: ‘ಉಕ್ರೇನ್‌ನಲ್ಲಿರುವ ಕನ್ನಡಿಗರು ಸೇರಿದಂತೆ ಎಲ್ಲ ರಾಜ್ಯಗಳ ಮಕ್ಕಳು ಸುರಕ್ಷಿತವಾಗಿ ಭಾರತಕ್ಕೆ ಮರಳಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ನಡೆದಿದೆ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸೋಮವಾರ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಗಳ ಜತೆಗೆ ಮಾತನಾಡಿದ ಅವರು, ‘ಕರ್ನಾಟಕವೂ ಸೇರಿದಂತೆ ಆಂಧ್ರ‍ಪ್ರದೇಶ, ತಮಿಳುನಾಡು, ಕೇರಳ ಹಾಗೂ ಉತ್ತರ ಭಾರತದ ಎಲ್ಲ ರಾಜ್ಯಗಳ ಮಕ್ಕಳು ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಬೇಕು. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ಉಕ್ರೇನ್ ನೆರೆಯ ರಾಷ್ಟ್ರಗಳಿಂದ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್‌ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಕೆಲವು ವಿಮಾನಗಳ ಮೂಲಕ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲಾಗಿದೆ. ಈಗ ಅಲ್ಲೇ ಉಳಿದುಕೊಂಡಿರುವ ಮಕ್ಕಳ ಬಗ್ಗೆ ಪೋಷಕರು ಆತಂಕಗೊಂಡಿದ್ದಾರೆ. ಅವರು ಭಯ ಪಡುವ ಅಗತ್ಯವಿಲ್ಲ. ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ರಕ್ಷಿಸಲಾಗುವುದು’ ಎಂದು ಹೇಳಿದರು.

ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಮೇಕೆದಾಟು ಯೋಜನೆ ಇಂದು ನಿನ್ನೆಯದಲ್ಲ. ಆದರೆ, ಹಲವು ಕಾರಣಗಳಿಂದಾಗಿ ಈವರೆಗೆ ಅನುಷ್ಠಾನಗೊಂಡಿಲ್ಲ. ಕಾಂಗ್ರೆಸ್‌ನವರಿಗೆ ಈಗ ಯಾವುದೇ ವಿಷಯವಿಲ್ಲ. ಹೀಗಾಗಿ ರಾಜಕಾರಣಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ನಮ್ಮ ಸರ್ಕಾರ ಬಂದ ಬಳಿಕ ಯೋಜನೆಗೆ ಪುಷ್ಠಿ ನೀಡುವ ಕೆಲಸವಾಗಿದೆ. ಕಾನೂನಿನ ತೊಡಕಿನ ಕಾರಣದಿಂದಾಗಿ ಯೋಜನೆ ನಿಧಾನವಾಗಿದೆ. ಅದು ನಿವಾರಣೆ ಆದ ಕೂಡಲೇ ಯೋಜನೆ ಲೋಕಾರ್ಪಣೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT