ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CMಗೆ ‘ಸಿದ್ರಾಮುಲ್ಲಾಖಾನ್‌’ ಎಂದ ಅನಂತಕುಮಾರ್: ಯತೀಂದ್ರ ಪ್ರತಿಕ್ರಿಯೆ ಹೀಗಿತ್ತು

Published 26 ಫೆಬ್ರುವರಿ 2024, 4:09 IST
Last Updated 26 ಫೆಬ್ರುವರಿ 2024, 4:09 IST
ಅಕ್ಷರ ಗಾತ್ರ

ಗದಗ: ‘ಯಾರು ಯಾವ ಸಮುದಾಯಕ್ಕೋಸ್ಕರವಾಗಿ ಹೆಚ್ಚು ಕೆಲಸ ಮಾಡುತ್ತಾರೋ ಅವರನ್ನು ಒಂದು ಸಮುದಾಯದ ಪರ ಅಂತ ಬಿಂಬಿಸುವುದು ಬಿಜೆಪಿ ನಾಯಕರ ಹಳೆಯ ವರಸೆ’ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಂಸದ ಅನಂತಕುಮಾರ್‌ ಹೆಗಡೆ ಅವರು ಸಿಎಂಗೆ ‘ಸಿದ್ರಾಮುಲ್ಲಾಖಾನ್‌’ ಎಂದು ಕರೆದಿದ್ದಕ್ಕೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದರು.

‘ಸಂಸದ ಅನಂತ ಕುಮಾರ್‌ ಹೆಗಡೆ ಐದು ವರ್ಷಗಳ ಕಾಲ ಏನೂ ಕೆಲಸ ಮಾಡಿಲ್ಲ, ಜನರ ಮುಂದೆ ಬಂದಿಲ್ಲ. ಸಂಸತ್ತಿನಲ್ಲಿ ಒಂದು ಪ್ರಶ್ನೆಯನ್ನೂ ಕೇಳಿಲ್ಲ. ಈಗ ಚುನಾವಣೆ ಬಂದಿದೆ ಅಂತ ಹಿಂದೂ ಮುಸ್ಲಿಂ ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಹುಟ್ಟುಹಾಕಲು ಮಾತನಾಡುತ್ತಿದ್ದಾರೆ’ ಎಂದು ದೂರಿದರು.

‘ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಜನರು ಎಂದಿಗೂ ಒಪ್ಪುವುದಿಲ್ಲ. ಕರ್ನಾಟಕದ ಜನರ ಪರ ಒಂದೇ ಒಂದು ಪ್ರಶ್ನೆ ಕೇಳದ ಅನಂತ ಕುಮಾರ್‌ ಅವರಿಗೆ ಜನರು ಬುದ್ಧಿ ಕಲಿಸುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT