ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ: ಸಚಿವ ಶ್ರೀರಾಮುಲು ವಾಗ್ದಾಳಿ

Last Updated 17 ಡಿಸೆಂಬರ್ 2021, 5:43 IST
ಅಕ್ಷರ ಗಾತ್ರ

ಗದಗ: ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಬೇಕು; ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಎಂಬ ಉದ್ದೇಶದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ, ರ‍್ಯಾಲಿ ನಡೆಸುವ ಮೂಲಕ ಜನತೆಯ ದಿಕ್ಕು ತಪ್ಪಿಸುವ ನಾಟಕವಾಡುತ್ತಿದ್ದಾರೆ’ ಎಂದು ಸಚಿವ ಶ್ರೀರಾಮುಲು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಈ ಭಾಗದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು, ಶಾಸಕರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರದ ಸಚಿವರು ಸಿದ್ಧರಿದ್ದಾರೆ. ಆದರೆ, ಅಧಿಕಾರ ಕಳೆದುಕೊಂಡು ಹತಾಶೆಯಲ್ಲಿರುವ ಕಾಂಗ್ರೆಸ್ ಈ ರೀತಿ ಕೆಲಸ ಮಾಡುವುದನ್ನು ಬಿಟ್ಟು, ಚರ್ಚೆಯಲ್ಲಿ ಪಾಲ್ಗೊಳ್ಳಲಿ’ ಎಂದು ಸವಾಲೆಸೆದರು.

ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಮೊಟ್ಟೆ ವಿತರಿಸಲಾಗುತ್ತಿದೆ. ಬೇಕಿದ್ದವರು ಮೊಟ್ಟೆ ತಿನ್ನಬಹುದು; ತಿನ್ನದವರು ಸಸ್ಯಹಾರ ಸೇವಿಸಬಹುದು. ಆಹಾರ ಸೇವನೆ ಅವರವರ ಹವ್ಯಾಸಕ್ಕೆ ಬಿಟ್ಟಿದ್ದು. ಆ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

‘ಕಾಂಗ್ರೆಸ್ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡುತ್ತಿದ್ದೆವು. ಈಗ ಅವರು ನಮ್ಮ ಮೇಲೆ ವಿನಾಕಾರಣ 40 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ದಾರೆ. ಅವರಲ್ಲಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ಕಾಂಗ್ರೆಸ್‍ನವರು ಸತ್ಯಹರಿಶ್ಚಂದ್ರರಲ್ಲ. ಅವರು ಹೇಳಿದ್ದೆಲ್ಲವೂ ಸತ್ಯವಲ್ಲ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT