ಗದಗ: ‘ಸಿಎಂ ಬದಲಾವಣೆ ವಿಷಯದಲ್ಲಿ ಅಲ್ಲೋಲನೂ ಇಲ್ಲ; ಕಲ್ಲೋಲನೂ ಇಲ್ಲ. ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ನಾವು ಸರ್ಕಾರ ಮಾಡುತ್ತೇವಾ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದರು.

‘ಅಧಿವೇಶನ ಮುಗಿದ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತದೆ’ ಎಂಬ ಬೊಮ್ಮಾಯಿ ಹೇಳಿಕೆಗೆ ಜಾರ್ಜ್ ತಿರುಗೇಟು ನೀಡಿ, ‘ಬಸವರಾಜ ಬೊಮ್ಮಾಯಿ ಕೂಡ ಸಿಎಂ ಆಗಿದ್ದವರು. ಎಂತಹ ಪರಿಸ್ಥಿತಿ ಇದೆ ಅಂತ ಬಿಜೆಪಿಯವರಿಗೂ ಗೊತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಸಚಿವ ಸಂಪುಟ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದು ಸಿಎಂ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ‘ ಎಂದರು.

ಅಡುಗೆ ಅನಿಲ ಸಮಸ್ಯೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಷಯಕ್ಕೆ ಪ್ರತಿಕ್ರಿಯಿಸಿ, ‘ಪ್ರಧಾನಿ ಮೋದಿ ಅವರು ಸಿಎಂ ಪತ್ರಕ್ಕೆ ಸ್ಪಂದಿಸಬೇಕಲ್ಲ? ಕೋವಿಡ್ ಸಂದರ್ಭದಲ್ಲಿ ಹೇಗೆ ಆಯಿತು ಎಂದು ಎಲ್ಲರೂ ನೋಡಿದ್ದಾರೆ. ಸಿದ್ಧತೆ ಮಾಡಿಕೊಳ್ಳದ ಕಾರಣಕ್ಕೆ ಹೀಗೆ ಆಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.