ಮಂಗಳವಾರ, ಸೆಪ್ಟೆಂಬರ್ 28, 2021
24 °C

ಅನಾಗರಿಕ ಟೀಕೆಗೆ ಉತ್ತರ ಕೊಡುವ ಸಾಮರ್ಥ್ಯ ಪಕ್ಷಕ್ಕಿದೆ: ಸಚಿವ ಕೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಇಲಾಖೆ ಜತೆಗೆ ಸಭೆ ನಡೆಸಿ ನಿಯಮ ರೂಪಿಸಲಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಕೊರೊನಾ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ಮಾಡಬೇಕಿದ್ದರೂ ಕೋವಿಡ್‌–19 ಮಾರ್ಗಸೂಚಿಗಳ ಅನುಸಾರವೇ ಮಾಡಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಭರವಸೆ ಇದೆ’ ಎಂದು ಹೇಳಿದರು.

ಶಾಸಕ ಎಚ್‌.ಡಿ.ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಆಡಳಿತವನ್ನು ಸಮರ್ಥಿಸುತ್ತಾರೆ, ಸಂಘಟನೆಯನ್ನು ಸ್ವಾಗತಿಸುತ್ತಾರೆ ಎಂಬ ಭ್ರಮೆಯಲ್ಲಿ ನಾವಿಲ್ಲ. ಅವರ ಅನಾರೋಗ್ಯಕರ ಟೀಕೆಗೆ ಸಮಯ ಬಂದಾಗ ತಕ್ಕ ಉತ್ತರ ಕೊಡುವ ಸಾಮರ್ಥ್ಯ ಪಕ್ಷಕ್ಕಿದೆ’ ಎಂದು ಹೇಳಿದರು.

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ವ್ಯವಸ್ಥೆ ಕಲ್ಪಿಸಿಕೊಡಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.