ಗದಗ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿನಿ ಸ್ಮಿತಾ, ‘ಇಂದು ನನ್ನ ಜನ್ಮದಿನ. ಅದಕ್ಕಾಗಿ ನೀವೇ ಕೇಕ್ ಕತ್ತರಿಸಬೇಕು’ ಎಂದು ಬೇಡಿಕೆ ಇಟ್ಟಳು. ವಿದ್ಯಾರ್ಥಿನಿಯ ಪ್ರೀತಿಯ ಒತ್ತಾಯಕ್ಕೆ ಮಣಿದ ಸಚಿವರು, ಕೇಕ್ ಕತ್ತರಿಸಿ ಶುಭಾಶಯ ತಿಳಿಸಿದರು. ಜನ್ಮದಿನವನ್ನು ಸಚಿವರ ಜತೆಗೆ ಆಚರಿಸಿಕೊಂಡ ವಿದ್ಯಾರ್ಥಿನಿಯ ಸಂತಸ ಮುಗಿಲು ಮುಟ್ಟಿತ್ತು.

ತದನಂತರ ಸಚಿವರು, ವಸತಿ ನಿಲಯದಲ್ಲಿ ಒದಗಿಸಲಾಗುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಇಲಾಖೆ ‘ವ್ಯಾಪ್ತಿಯ ಎಲ್ಲ ವಸತಿ ನಿಲಯಗಳಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುವುದು. ಪ್ರೋತ್ಸಾಹ ಧನ ಬಿಡುಗಡೆಗೆ ಶೀಘ್ರ ಕ್ರಮ ಜರುಗಿಸಲಾಗುವುದು’ ಎಂದರು.

ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಹರಣ ಶಿಕಾರ ಕಾಲೊನಿಯಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಕೋಶದಿಂದ ನಿರ್ಮಾಣ ಆಗುತ್ತಿರುವ ವಸತಿರಹಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಎಸ್ಸಿಎಸ್ಪಿ, ಟಿಎಸ್ಪಿ ಕೋಶದ ನಿರ್ದೇಶಕಿ ಊರ್ಮಿಳಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.