ಲಕ್ಷ್ಮೇಶ್ವರ: ಪಟ್ಟಣದ ಇತಿಹಾಸ ಪ್ರಸಿದ್ಧ ಸೋಮೇಶ್ವರ ದೇವಸ್ಥಾನದ ಕೂಗಳತೆ ದೂರದಲ್ಲಿರುವ ಮಾಂಸದಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಮತ್ತು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪುರಸಭೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರಿಗೆ ಮನವಿ ಸಲ್ಲಿಸಿದರು.

ಶ್ರೀರಾಮ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಪೂಜಾರ ಮಾತನಾಡಿ, ‘ದೇವಸ್ಥಾನ ಬಳಿ ಇರುವ ಮಾಂಸದಂಗಡಿ ತೆರವುಗೊಳಿಸುವಂತೆಹಲವು ಬಾರಿ ಹೋರಾಟ ಮಾಡಿ ಪುರಸಭೆಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಒಂದು ವಾರದೊಳಗೆ ಅಂತಹ ಅಂಗಡಿಗಳನ್ನು ಸ್ಥಳಾಂತರ ಮಾಡದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಚಂಬಣ್ಣ ಬಾಳಿಕಾಯಿ, ಬಸಣ್ಣ ಮಹಾಂತಶೆಟ್ಟರ ಮಾತನಾಡಿ, ‘ದೇವಸ್ಥಾನದ ಹತ್ತಿರದಲ್ಲಿ ಇರುವ ಮಟನ್, ಚಿಕನ್, ಮೀನಿನ ಅಂಗಡಿಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸಿದರೂ ಪುರಸಭೆ ಅಧಿಕಾರಿಗಳು ಮಾತ್ರ ಯಾವ ಆದೇಶಕ್ಕೂ ಕ್ಯಾರೆ ಎಂದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತದೆ. ಹಿಂದೂಗಳು ಸಹನಾಶೀಲರು. ದಯವಿಟ್ಟು ಅಧಿಕಾ ರಿಗಳು ಅವರ ಸಹನೆ ಪರೀಕ್ಷಿಸಬಾರದು. ಆದಷ್ಟು ಬೇಗನೇ ಮಾಂಸ ಮಾರಾಟದ ಅಂಗಡಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.

ಸೋಮೇಶ ಉಪನಾಳ, ಗಂಗಾಧರ ಮೆಣಸಿನಕಾಯಿ, ರಾಜು ಅಂದಲಗಿ, ವಿಜಯ ಕುಂಬಾರ, ಪ್ರವೀಣ ಬೋಮಲೆ, ಬಸವರಾಜ ಚಕ್ರಸಾಲಿ, ಗುರುರಾಜ ಪಾಟೀಲ ಕುಲಕರ್ಣಿ, ಥಾವರೆಪ್ಪ ಲಮಾಣಿ, ಸಂಗಮೇಶ ಬೆಳವಲಕೊಪ್ಪ, ಉಳವೇಶ ಪಾಟೀಲ, ಗಿರೀಶ ಚೌರೆಡ್ಡಿ, ಮಂಜುನಾಥ ಹೊಗೆಸೊಪ್ಪಿನ, ವಿಶಾಲ ಬಟಗುರ್ಕಿ, ದುಂಡೇಶ ಕೊಟಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-1155579662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.