ಗದಗ: ‘ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವ ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ನಡೆದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಲಕ್ಕುಂಡಿಯ ಪುರಾತತ್ವ ಸಂಪತ್ತಿನ ಸಂರಕ್ಷಣೆ, ದೇವಾಲಯಗಳ ಪುನರುಜ್ಜೀವನ, ಪುರಾತನ ಬಾವಿಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯಗಳನ್ನು ಸಮನ್ವಯದಿಂದ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಲಕ್ಕುಂಡಿಯಲ್ಲಿ ಈಗಾಗಲೇ 15 ಬಾವಿ ಹಾಗೂ 15 ದೇವಾಲಯಗಳನ್ನು ಸಾರ್ವಜನಿಕರಿಗೆ ಪರಿಚಯಿಸಲಾಗಿದೆ. ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒಳಗಾಗಿ ತಮ್ಮ ಗುರುತನ್ನು ಕಳೆದುಕೊಂಡಿದ್ದ ಅನೇಕ ಪಾರಂಪರಿಕ ತಾಣಗಳನ್ನು ಸರ್ಕಾರ ಮತ್ತು ಸ್ಥಳೀಯರ ಸಹಕಾರದಿಂದ ಮರು ಅನಾವರಣಗೊಳಿಸುವ ಕಾರ್ಯ ಯಶಸ್ವಿಯಾಗಿ ನಡೆಯಲಿದೆ’ ಎಂದು ಹೇಳಿದರು.

2026ರ ಅಂತ್ಯದೊಳಗೆ ಕನಿಷ್ಠ 50 ಬಾವಿ ಹಾಗೂ 50 ದೇವಾಲಯಗಳನ್ನು ಗುರುತಿಸುವ, ಲಕ್ಕುಂಡಿಯ ಪಾರಂಪರಿಕ ತಾಣಗಳ ಸಂಖ್ಯೆಯನ್ನು 100ರ ಗಡಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಾಕಾರಕ್ಕೆ ಸ್ಥಳೀಯರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದರು.

ನರಗುಂದ ಶಾಸಕ ಸಿ.ಸಿ.ಪಾಟೀಲ ಮಾತನಾಡಿ, ‘ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಲಕ್ಕುಂಡಿಯ ಪುರಾತತ್ವ ಸಂಪತ್ತು ಇಂದಿನ ಪೀಳಿಗೆಗೆ ಅಚ್ಚರಿಯ ಸಂಗತಿಯಾಗಿದೆ. ಆ ಕಾಲದ ಶಿಲ್ಪಿಗಳ ಪ್ರತಿಭೆ, ಕಲಾತ್ಮಕತೆ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಇಲ್ಲಿ ದೊರೆಯುತ್ತಿರುವ ಶಿಲ್ಪಗಳು ಹಾಗೂ ಪುರಾವೆಗಳು ಜೀವಂತ ಸಾಕ್ಷಿಗಳಾಗಿವೆ’ ಎಂದು ಹೇಳಿದರು.

ಸಭೆಯಲ್ಲಿ ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರು ಲಕ್ಕುಂಡಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು.

ಪಾರಂಪರಿಕ ತಾಣಗಳ ಸಂರಕ್ಷಣೆ, ಪ್ರವಾಸೋದ್ಯಮ ವಿಸ್ತರಣೆ, ಸ್ಥಳೀಯ ಕಲಾ ಪರಂಪರೆಯ ಉತ್ತೇಜನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿ.ಜಿ.ಬೆಟಸೂರಮಠ, ಸಿದ್ದಲಿಂಗೇಶ್ವರ ಎಚ್. ಪಾಟೀಲ, ಗೀತಾಂಜಲಿ ರಾವ್, ಅ.ದ.ಕಟ್ಟಿಮನಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ, ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಎ., ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-23-1550343240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.