ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಆರಂಭಗೊಂಡಿದೆ. ಶುಕ್ರವಾರ ಬೆಳಿಗ್ಗೆ 11ಕ್ಕೆ ಆರಂಭವಾದ ಉತ್ಖನನವು ಸಂಜೆ 5.30ರ ವರೆಗೆ ನಡೆದಿದ್ದು, ದಿನದ ಅಂತ್ಯಕ್ಕೆ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.

ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ.ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದ್ದು, ಉತ್ಖನನ ಕುರಿತು ಪುರಾತತ್ವ ಅಧಿಕಾರಿಗಳು ಕಾರ್ಮಿಕರಿಗೆ ಮಾಹಿತಿ ನೀಡಿದರು. ಸೂಕ್ಷ್ಮತೆಯಿಂದ ಉತ್ಖನನ ನಡೆಸಬೇಕು. ಯಾವುದೇ ವಸ್ತು ಸಿಕ್ಕರೂ ಅದನ್ನು ತಿಳಿಸಬೇಕು ಎಂದು ಸೂಚನೆ ನೀಡಿದರು.

ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ 10X10 ಸುತ್ತಳತೆಯಲ್ಲಿ ನಡೆದ ಉತ್ಖನನದಲ್ಲಿ ಶುಕ್ರವಾರ 1 ಅಡಿ ಆಳದಷ್ಟು ಮಾತ್ರ ಮಣ್ಣು ಅಗೆಯಲಾಗಿದ್ದು, ಇನ್ನೂ ಸುಮಾರು 7 ರಿಂದ 8 ಅಡಿ ಆಳ ಅಗೆದರೆ ಏನಾದರೂ ಅವಶೇಷಗಳು, ಆಭರಣ, ವಸ್ತುಗಳು ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 20 ಜನ ಮಹಿಳೆಯರು, 10 ಜನ ಪುರುಷರು ಸೇರಿ ಒಟ್ಟು 30 ಕಾರ್ಮಿಕರನ್ನು ಉತ್ಖನನಕ್ಕೆ ಬಳಸಿಕೊಳ್ಳಲಾಗಿದೆ.

ಪುರಾತತ್ವ ಇಲಾಖೆ, ಜಿಲ್ಲಾಡಳಿತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಉತ್ಖನನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ‘ಭೂಮಿಯ ಒಡಲಿನಲ್ಲಿ ಏನಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ದೇವಸ್ಥಾನದ ಕುರುಹು ಇರುವ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಉತ್ಖನನಕ್ಕೆ ಚಾಲನೆ ಸಿಕ್ಕಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಪ್ರಾಧಿಕಾರದ ರಾಜ್ಯ ಸಮಿತಿ ಸದಸ್ಯ ಸಿದ್ದು ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ ಪೂಜಾರ, ಪಿಡಿಒ ಅಮೀರ ನಾಯ್ಕ ಇದ್ದರು.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನಕ್ಕೂ ಮುನ್ನ ಉತ್ಖನನದ ಜಾಗೆ ಹಾಗೂ ಉತ್ಖನನಕ್ಕೆ ಬೇಕಾಗುವ ಸಲಕರಣಗೆಳಿಗೆ ಪೂಜೆ ಸಲ್ಲಿಸಲಾಯಿತು. ನಂತರ 30 ಕಾರ್ಮಿಕರಿಂದ ಉತ್ಖನನ ಪ್ರಕ್ರಿಯೆ ಆರಂಭವಾಯಿತು.

ಸಾರ್ವಜನಿಕರ ಪ್ರವೇಶ, ಫೋಟೊಗ್ರಫಿಗೆ ನಿರ್ಬಂಧ

ಲಕ್ಕುಂಡಿ ಗ್ರಾಮದಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ಬಳಿ ನಡೆದಿರುವ ಉತ್ಖನನ ಸ್ಥಳಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಅಲ್ಲಿ ಫೋಟೊಗ್ರಫಿ ಮತ್ತು ವಿಡಿಯೋಗ್ರಫಿ ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಉತ್ಖನನದ ಸಹ ನಿರ್ದೇಶಕರ ಪತ್ರದ ಅನ್ವಯ ಈ ಆದೇಶ ಹೊರಡಿಸಿದ್ದು ಉತ್ಖನನ ಕಾರ್ಯ ಪೂರ್ಣಗೊಳ್ಳುವವರೆಗೆ ಇದು ಜಾರಿಯಲ್ಲಿರಲಿದೆ. ಉತ್ಖನನ ಸ್ಥಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಿಸಿದವರನ್ನು ಹೊರತುಪಡಿಸಿ ಇಲ್ಲಿ ಬೇರೆಯವರಿಗೆ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಮತ್ತು ಸಿದ್ಧರ ಬಾವಿ ನಡುವೆ ಆರಂಭಿಸಿರುವ ಉತ್ಖನನ ಕಾರ್ಯದಿಂದ ಲಕ್ಕುಂಡಿಯ ಹೊಸ ಇತಿಹಾಸ ಕಟ್ಟುವಲ್ಲಿ ನೆರವಾಗುವ ಪ್ರಾಚ್ಯಾವಶೇಷಗಳು ಸಿಗುವ ನಿರೀಕ್ಷೆ ಇದೆ
–ಶೈಜೇಶ್ವರ ಪುರಾತತ್ವ ಇಲಾಖೆ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.