ಲಕ್ಕುಂಡಿ: ‘101 ದೇವಾಲಯ, 101 ಕಲ್ಯಾಣಿಗಳನ್ನು ಹೊಂದಿರುವ ಇತಿಹಾಸ ಪ್ರಸಿದ್ದ ಲಕ್ಕುಂಡಿ ಗ್ರಾಮದಲ್ಲಿ ಜೈನ ಬಸದಿಗಳನ್ನು ಅಭಿವೃದ್ಧಿ ಮಾಡುವುದರ ಜತೆಗೆ ಅವುಗಳ ಸಂರಕ್ಷಣೆಗೆ ಮುಂದಾಗಿರುವ ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ’ ಎಂದು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾಚಾರ್ಯ ಪಂಡಿತಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಪ್ರಾಚೀನ ಸ್ಮಾರಕಗಳನ್ನು ವೀಕ್ಷಣೆ ಮಾಡಿ ಮಾತನಾಡಿದ ಶ್ರೀಗಳು, ‘ಈ ಭಾಗದಲ್ಲಿ ಹೆಚ್ಚು ಪ್ರಾಚೀನ ಸ್ಮಾರಕಗಳಿವೆ ಎಂಬುದು ಇತಿಹಾಸದ ಪುಸ್ತಕಗಳಿಂದ ತಿಳಿದಿದ್ದು ಪ್ರವಾಸೋದ್ಯಮ ಇಲಾಖೆಯು ಲಕ್ಕುಂಡಿ ಅಭಿವೃದ್ದಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆಯು ಅವುಗಳ ರಕ್ಷಣಿಗೆ ಮುಂದಾಗಿರುವುದು ಶ್ಲಾಘನೀಯ’ ಎಂದರು.

‘ಈ ಯುಗದಲ್ಲಿ 6 ಕಾಲಚಕ್ರಗಳು ಬರುತ್ತವೆ. ಅದರಂತೆ, ಇದು ಪಂಚಮಕಾಲವಾಗಿದೆ. ಇಲ್ಲಿರುವ ಜೈನ ಬಸದಿಯಲ್ಲಿ ನೇಮಿನಾಥ ತೀರ್ಥಂಕರ ಮೂರ್ತಿಯಿದೆ. ಪ್ರಾಚೀನ ಕಾಲದಿಂದಲೂ 24 ತೀರ್ಥಂಕರರು ಆಳಿದ್ದು ಕೊನೆಯದಾಗಿ ಭಗವಾನ್ ಮಹಾವೀರರು ರಾಜರಾಗಿದ್ದರು. ಕೋಟ್ಯಂತರ ವರ್ಷದಿಂದಲೂ ಜೈನ ಸಂಸ್ಕೃತಿ ಪರಂಪರೆ ಇದೆ. ಭೂತ ಕಾಲದಿಂದಲೂ ಭವಿಷ್ಯತ್ ಕಾಲದವರೆಗೂ 24 ತೀರ್ಥಂಕರರು ಇದ್ದೇ ಇರುತ್ತಾರೆ ಎಂದು ಜೈನ ಸಿದ್ದಾಂತಗಳು ಹೇಳುತ್ತವೆ’ ಎಂದರು.

ಬ್ರಹ್ಮಜಿನಾಲಯ, ನಾಗನಾಥ, ನನ್ನೇಶ್ವರ, ಕಾಶಿ ವಿಶ್ವನಾಥ ಹಾಗೂ ಮುಸ್ಕಿನಭಾವಿಯಲ್ಲಿರುವ ಶಿಲ್ಪಕಲೆ ಹಾಗೂ ಪ್ರಾಚ್ಯಾವಶೇಷಗಳ ವಸ್ತು ಸಂಗ್ರಾಲಯವನ್ನು ವೀಕ್ಷಿಸಿದ ಶ್ರೀಗಳು, ಶಿಲ್ಪಕಲೆಯ ಇತಿಹಾಸವನ್ನು ಇತಿಹಾಸ ತಜ್ಞ ಅ.ದ. ಕಟ್ಟಿಮನಿಯವರಿಂದ ತಿಳಿದುಕೊಂಡರು.

ಲಕ್ಕುಂಡಿ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಇಲ್ಲಿ ಅಭಿವೃದ್ಧಿಪಡಿಸುತ್ತಿರುವ ಸ್ಮಾರಕಗಳು, ಪ್ರಾಚ್ಯಾವಶೇಷಗಳು ಹಾಗೂ ಉತ್ಕನನದ ಕುರಿತು ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದರು.

ಚಾರುಕೀರ್ತಿ ಭಟ್ಟಾಚಾರ್ಯರು ಹಾಗೂ ವರೂರು ಕ್ಷೇತ್ರದ ಅಮೀನಭಾವಿಯ ಧರ್ಮಸೇನಾ ಪಟ್ಟಾಧ್ಯಕ್ಷರನ್ನು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ ಗೌರವಿಸಿದರು.

ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕೊಟ್ರೇಶ ವಿಭೂತಿ, ಗದಗ ಜಿಲ್ಲಾ ಜೈನ ಸಮಾಜದ ಅಧ್ಯಕ್ಷ ಬಿ.ಎ.ಕುಲಕರ್ಣಿ, ಅಜ್ಜಪ್ಪಗೌಡ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಣ್ಣಪ್ಪ ಬಸ್ತಿ ಇದ್ದರು.

ಜೈನ ಧರ್ಮ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

‘ಲಕ್ಕುಂಡಿಯಲ್ಲಿ ದೊರೆತ ಅವಶೇಷಗಳಲ್ಲಿ ಜೈನ ಶಾಸನಗಳು ಮೂರ್ತಿಗಳು ಶಿಲ್ಪಕಲೆಗಳು ಪ್ರಮುಖವಾಗಿವೆ’ ಎಂದು ಚಾರುಕೀರ್ತಿ ಶ್ರೀಗಳು ಹೇಳಿದರು. ‘ಭಾರತವು ಹಿಂದಿನಿಂದಲೂ ಸಂಪದ್ಭರಿತ ನಾಡಾಗಿದ್ದು ದೇಶಾದ್ಯಂತ ಜೈನ ಮಂದಿರಗಳು ಸ್ಮಾರಕಗಳು ಕಾಣಸಿಗುತ್ತವೆ ಇಲ್ಲಿಯ ಶಿಲ್ಪಕಲೆ ಸಂಸ್ಕೃತಿಯು ಜೈನ ರಾಜರ ನೆಲೆಯಾಗಿತ್ತು. ವಿದೇಶಿಗರು ಜೈನ ಧರ್ಮದ ಮೇಲೆ ಅಕ್ರಮಣ ಮಾಡಿ ನಾಶ ಮಾಡಿದ್ದಾರೆ’ ಎಂದರು. ‘ಕನ್ನಡ ಸಾಹಿತ್ಯದಲ್ಲಿ ಪಂಪ ರನ್ನ ಪೊನ್ನ ಮತ್ತು ಚನ್ನ ಕವಿಗಳು ಕನ್ನಡಕ್ಕಾಗಿ ತಮ್ಮ ಅಮೋಘ ಕೊಡುಗೆಯನ್ನು ನೀಡಿದ್ದಾರೆ. ಜೈನರ ಪರಂಪರೆ ಸಂಸ್ಕೃತಿಯನ್ನು ಸಂರಕ್ಷಣಿ ಮಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.