ಲಕ್ಷ್ಮೇಶ್ವರ: ‘ಗ್ರಾಮೀಣ ಉದ್ಯೋಗಕ್ಕೆ ಉತ್ತೇಜನ ನೀಡಿ, ವಿಶೇಷವಾಗಿ ರೈತರು, ಮಹಿಳೆಯರು, ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ದೊಡ್ಡ ಪ್ರಮಾಣದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಅಡರಕಟ್ಟಿ ಸಹಕಾರ ಸಂಘ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ಕೆಸಿಸಿ ಬ್ಯಾಂಕ್ ಧಾರವಾಡ, ಕೆಎಂಎಫ್ ಧಾರವಾಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಡರಕಟ್ಟಿ ಹಾಗೂ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲ್ಲೂಕುಗಳ ಸಹಕಾರ ಸಂಘ ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಅಡರಕಟ್ಟಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜರುಗಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಸಿಸಿ ಬ್ಯಾಂಕ್ನ ನಿರ್ದೇಶಕ ಜಿ.ವಿ. ಪಾಟೀಲ ಮಾತನಾಡಿ, ‘ಸಂಘದ ಆಡಳಿತ ಮಂಡಳಿ ಸದಸ್ಯರು ಕ್ರಿಯಾಶೀಲರಾಗಿದ್ದು, ಕಾನೂನಾತ್ಮಕವಾಗಿ, ಸಾಮಾಜಿಕವಾಗಿ ಸಂಘದ ಸದಸ್ಯರಿಗೆ ಸಹಾಯ, ಸಹಕಾರ ನೀಡುತ್ತಿದೆ’ ಎಂದು ಹೇಳಿದರು.

ಲಕ್ಷ್ಮೇಶ್ವರದ ಸೋಮೇಶ್ವರ ಸಹಕಾರ ನೂಲಿನ ಗಿರಣಿ ಅಧ್ಯಕ್ಷ ಪುಲಕೇಶಿ ಉಪನಾಳ ಮಾತನಾಡಿ, ‘ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೆ, ಸಹಕಾರ ಚಟುವಟಿಕೆಗಳಿಗೆ ಸಹಕಾರ ವಲಯವೇ ಮೂಲಾಧಾರವಾಗಿದೆ. ಗ್ರಾಮೀಣಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಸಹಕಾರ ಕ್ಷೇತ್ರದ ಬೆಳವಣಿಗೆಯನ್ನು ಆಧಾರವಾಗಿಸಿಕೊಂಡು ಕೇಂದ್ರ ಸರ್ಕಾರವು ರಾಷ್ಟ್ರೀಯ ಸಹಕಾರಿ ನೀತಿ 2025ಯನ್ನು ಅನಾವರಣಗೊಳಿಸಿದೆ. ಸಹಕಾರಿ ನೀತಿ ಪರಿಚಯದೊಂದಿಗೆ ಕೇಂದ್ರ ಸರ್ಕಾರ ಸಹಕಾರ ವಲಯದಲ್ಲಿ ಅಮೂಲಾಗ್ರ ಪರಿವರ್ತನೆಗೂ ಸಜ್ಜಾಗಿದೆ. ರಾಷ್ಟ್ರದಾದ್ಯಂತ ಸಹಕಾರ ಸಂಘ ಸಂಸ್ಥೆಗಳನ್ನು ಆಧುನಿಕರಿಸಲು ವೃತ್ತಿಪರಗೊಳಿಸಲು ಮತ್ತು ವಿಸ್ತರಿಸಲು ಯೋಜನೆ ಹಾಕಿಕೊಂಡಿದೆ’ ಎಂದು ತಿಳಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರ್ಮಣ್ಣ ಮಹಾದೇವಪ್ಪ ಸಿದ್ದಾಪುರ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಡರಕಟ್ಟಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಚನ್ನಬಸಪ್ಪ ಹಾದಿಮನಿ, ಮಹಾಂತೇಶ ಹವಳದ ಮಾತನಾಡಿದರು. ಅಡರಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಮಾನಪ್ಪ ಲಮಾಣಿ, ಬಸವರಾಜ ನಮಂಟೂರ, ಎಚ್.ಎ. ಬಂಡೆಣ್ಣವರ, ಕೆ.ಸಿ. ಕೂಸನೂರಮಠ, ಬಿ.ಆರ್. ನಿಡಗುಂದಿ, ಮಂಜುನಾಥ ಹೂಗಾರ, ವಿಶ್ವನಾಥ ಲಮಾಣಿ, ಡಾ.ಪ್ರಸನ್ನ ಪಟ್ಟೇದ, ಬಸವರಾಜ ಜುಮ್ಮಣ್ಣವರ, ಕಿರಣ ಪಾಟೀಲ ಇದ್ದರು. ಚಂದ್ರಶೇಖರ ಕರಿಯಪ್ಪನವರ ಸ್ವಾಗತಿಸಿ, ನಿರೂಪಿಸಿದರು. ನಿಂಗನಗೌಡ ಪಾಟೀಲ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.