ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ವೇದಿಕೆ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಜಿನ್ನಿಂಗ್ ಕಾರ್ಖಾನೆಯಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಕಾರ್ಯಕ್ರಮದ ಅಂಗವಾಗಿ ಶತಾಯುಷಿ ಮತ್ತು ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಲಾಗುತ್ತದೆ’ ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಶತಾಯುಷಿಗಳಾದ ಈರಮ್ಮ ಕೊಂಚಿಗೇರಿಮಠ, ನೀಲಮ್ಮ ಪುರಾಣಿಕಮಠ, ಸಾವಿತ್ರಮ್ಮ ಹೂವಿನ, ಸೋಮವ್ವ ಚಕ್ರಸಾಲಿ, ಶಾಂತವ್ವ ಕುಂಬಿ, ಸೀಮವ್ವ ಅರಳಿ ಅವರನ್ನು ಸನ್ಮಾನಿಸಲಾಗುವುದು. ಎಸ್.ಸಿ. ಅಳಗವಾಡಿ, ಸುನಂದಾ ಬೆನ್ನೂರ, ಲಲಿತಕ್ಕ ಕೆರಿಮನಿ, ಪ್ರತಿಮಾ ಮಹಾಜನಶೆಟ್ಟರ, ಸವಿತಾ ಬಿ ಆದಿ, ಮೀನಾಕ್ಷಿ ಮಟ್ಟಿ, ಮಂಜುಳಾ ಹೂಗಾರ ಪಾಲ್ಗೊಳ್ಳುವರು. ಮಾಲಾದೇವಿ ದಂದರಗಿ ಉಪನ್ಯಾಸ ನೀಡುವರು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-23-889889969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.