ಲಕ್ಷ್ಮೇಶ್ವರ: ಇಲ್ಲಿನ ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಪಶು ಆಸ್ಪತ್ರೆ ಕಂಪೌಂಡ್ ಒಳಗೆ ಅಪಾಯದ ಒಣಗಿ ನಿಂತಿರುವ ಮರಗಳನ್ನು ಅಲ್ಲಿಂದ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಗೂಡಂಗಡಿ ವ್ಯಾಪಾರಸ್ಥರಾದ ಸೋಮಣ್ಣ ನಂದೆಣ್ಣವರ, ಎಸ್.ಜಿ. ಯಲಿಗಾರ ಅವರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಎನ್.ಎಚ್.ಓಲೆಕಾರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಆಸ್ಪತ್ರೆ ಕಂಪೌಂಡ್ಗೆ ಹೊಂದಿಕೊಂಡಂತೆ ಸಣ್ಣ ಸಣ್ಣ ಡಬ್ಬಿ ಅಂಗಡಿಗಳನ್ನು ಇಟ್ಟುಕೊಂಡು ನಾವು ವ್ಯಾಪಾರ ಮಾಡುತ್ತಿದ್ದೇವೆ. ಮಳೆ ಗಾಳಿ ಬಿಟ್ಟಾಗ ಒಣಗಿದ ಮರಗಳು ಮುರಿದು ಬೀಳುವ ಅಪಾಯ ಇದೆ. ಮರಗಳನ್ನು ತೆರವುಗೊಳಿಸುವಂತೆ ಅನೇಕ ಬಾರಿ ಸಂಬಂಧಿಸಿದ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ವಲಯ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಒಣಗಿರುವ ಮರಗಳು ಬಿದ್ದು ಅಪಾಯ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ. ಕಾರಣ ಆದಷ್ಟು ಬೇಗನೇ ಮರಗಳನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-23-905878773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.