ಲಕ್ಷ್ಮೇಶ್ವರ: ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ನಾಯ್ಕ ಹೇಳಿದರು.

ತಾಲ್ಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಗಂಡು, ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಸೂರಣಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಲು ಪಠ್ಯೇತರ ಚಟುವಟಿಕೆಗಳು ಸಹಕಾರಿ. ಪ್ರತಿ ವಿದ್ಯಾರ್ಥಿಯೂ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಎಂ. ಯರಗುಪ್ಪಿ ಮಾತನಾಡಿ, ‘ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಅದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ನೀಡುತ್ತಿರುವ ಒಂದು ಮಹತ್ವರ ವೇದಿಕೆ’ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ನೇಕಾರ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ, ಪ್ರದರ್ಶನಕ್ಕೆ ಉತ್ತೇಜನ ನೀಡಲಾಗುವುದು’ ಎಂದರು.

ಎಂ.ಎ.ನದಾಫ , ಲೋಕೇಶ ಮಠದ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಶಂಭಣ್ಣ ಬಳಿಗಾರ, ಮುಖ್ಯ ಶಿಕ್ಷಕ ಎಂ.ಎನ್.ಭರಮಗೌಡರ, ಎಂ.ಎಸ್.ಮಳಲಿ, ಲಕ್ಷ್ಮವ್ವ ಇಟಗಿ, ಬಸವರಾಜ ಮೂಲಿಮನಿ, ಭೀಮಜ್ಜ ದೊಡ್ಡಮನಿ, ಶರೀಫಸಾಬ ನದಾಫ ಮತ್ತು ಮಂಜಣ್ಣ ಮೂಲಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.