ಲಕ್ಷ್ಮೇಶ್ವರ: ‘ಪ್ರಶಿಕ್ಷಣ ವರ್ಗವು ಪಕ್ಷದ ಕಾರ್ಯಕರ್ತರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಮೂಡಿಸುವುದು ಮತ್ತು ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ಮೂಡಿಸುವ ಮಹಾ ಅಭಿಯಾನವಾಗಿದೆ’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಜಗದ್ಗುರು ವೀರಗಂಗಾಧರ ಕಲ್ಯಾಣ ಮಂಟಪದಲ್ಲಿ ಗುರುವಾರ ಪಂ.ದೀನದಯಾಳ ಉಪಾದ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಶಿರಹಟ್ಟಿ ಬಿಜೆಪಿ ಮಂಡಲದ ಎರಡು ದಿನಗಳವರೆಗೆ ನಡೆಯುವ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.

‘ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ದೇಶದಲ್ಲಿ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಆರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಆಗಿವೆ. ಕೇಂದ್ರ ಸರ್ಕಾರದ ಈ ಎಲ್ಲ ಸಾಧನೆಗಳನ್ನು ಕಾರ್ಯಕರ್ತರು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಗಂಗಾಧರ ಕುಂದಗೋಳಮಠ ಮಾತನಾಡಿ ‘ಪಕ್ಷದ ಕಾರ್ಯಕರ್ತರು ಖೊಟ್ಟಿ ಮತದಾರರನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು’ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ದೊಡ್ಡಗೌಡ್ರ, ವಿಜಯಕುಮಾರ ಹತ್ತಿಕಾಳ, ಸೋಮೇಶ ಉಪನಾಳ, ನಿಂಗಪ್ಪ ಬನ್ನಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಇಟಗಿ, ಸಂಗಮೇಶ ಬೆಳವಲಕೊಪ್ಪ, ಅಶೋಕ ಶಿರಹಟ್ಟಿ, ಭೀಮಣ್ಣ ಯಂಗಾಡಿ, ಬಸವರಾಜ ಚಕ್ರಸಾಲಿ, ನವೀನ ಹಿರೇಮಠ, ವಿಜಯ ಮೆಕ್ಕಿ, ಸಂತೋಷ ಜಾವೂರ, ಗಿರೀಶ ಚೌರಡ್ಡಿ, ಪ್ರವೀಣ ಬೋಮಲೆ, ವಿಜಯ ಕುಂಬಾರ, ಎನ್.ಬಿ. ಮಡಿವಾಳರ, ರವಿ ಕೋರಿ, . ಗಂಗಾಧರ ಮೆಣಸಿನಕಾಯಿ, ಅನೀಲ ಮುಳಗುಂದ, ರೋಹನ ಕುಂದನಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-23-1034045352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.