ಲಕ್ಷ್ಮೇಶ್ವರ: ‘ಡೆಂಗಿ ನಿಯಂತ್ರಣಕ್ಕೆ ಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿ ಪರಿಹಾರವಾಗಿದೆ’ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.

ಇಲ್ಲಿನ ಬಾಪೂಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರಹಟ್ಟಿ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಡೆಂಗಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮಳೆಗಾಲ ಪ್ರಾರಂಭವಾಗಿದ್ದು, ಅಲ್ಲಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ವಿವಿಧ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ, ಸೊಳ್ಳೆಗಳ ಸಂಖ್ಯೆ ವೃದ್ಧಿಸುತ್ತದೆ. ಇದರಿಂದ ಸೊಳ್ಳೆಗಳ ಮೂಲಕ ಹರಡುವ ಕಾಯಿಲೆಗಳು ಹೆಚ್ಚಾಗುವ ಸಂಭವ ಇರುತ್ತದೆ’ ಎಂದರು.

ಪ್ರಾಚಾರ್ಯ ಕೆ. ನಾಗರಾಜಪ್ಪ, ಸಿಬ್ಬಂದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಫ್.ಬಿ. ಹೂಗಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹಿರೇಮಠ,ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ. ಬಣಗಾರ, ಕೆ.ಎಂ. ಕುಲಕರ್ಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-321395519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.