ಸ್ಮಶಾನಗಳನ್ನು ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಮಹಾಂತಯ್ಯನಮಠದ ಹತ್ತಿರದ ಸ್ಮಶಾನದಲ್ಲಿ ಚಿತಾಗಾರ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಅದರೊಂದಿಗೆ ಶವ ಸಾಗಿಸಲು ಹೊಸ ವಾಹನ ಖರೀದಿಸಲು ಪ್ರಸ್ತಾವ ಸಲ್ಲಿಸಲಾಗಿದೆ.
–ಮಹೇಶ ಹಡಪದ ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೇಶ್ವರ
ಸ್ಮಶಾನಕ್ಕೆ ಜಾಗದ ವ್ಯವಸ್ಥೆ
ತಾಲ್ಲೂಕಿನ ಹಿರೇಮಲ್ಲಾಪುರ ಮತ್ತು ಸೋಗಿಹಾಳ ಹೊರತುಪಡಿಸಿ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲೂ ಸ್ಮಶಾನಕ್ಕೆ ಜಾಗದ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಹಿರೇಮಲ್ಲಾಪುರ ಹಾಗೂ ಸೋಗಿಹಾಳ ಗ್ರಾಮಗಳಲ್ಲೂ ರುದ್ರಭೂಮಿಗಾಗಿ ಜಾಗ ಖರೀದಿಗಾಗಿ ಪ್ರಸ್ತಾವ ಸಲ್ಲಿಸಲಾಗಿದ್ದು ಆದಷ್ಟು ಬೇಗನೆ ಜಾಗೆ ಖರೀದಿಸಲಾಗುವುದು.
ವಾಸುದೇವ ಸ್ವಾಮಿ, ಲಕ್ಷ್ಮೇಶ್ವರ ತಹಶೀಲ್ದಾರ್
ಮೂಲಸೌಲಭ್ಯ ಕಲ್ಪಿಸಲು ಕ್ರಮ ಕಳೆದ ಎರಡ್ಮೂರು ವರ್ಷಗಳ ಹಿಂದಷ್ಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕಾಗಿ ಜಾಗೆ ಖರೀದಿಸಿದ್ದು ಹಂತ ಹಂತವಾಗಿ ಎಲ್ಲ ರುದ್ರಭೂಮಿಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು. ಈಗಾಗಲೇ ನರೇಗಾ ಯೋಜನೆಯಡಿ ಕೆಲವು ಸ್ಮಶಾನಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ.