ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ

ಶಾಸಕ ಡಾ.ಚಂದ್ರು ಲಮಾಣಿ ಹೇಳಿಕೆ
Published 27 ಮಾರ್ಚ್ 2024, 14:12 IST
Last Updated 27 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಮುಂಡರಗಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಈಗ ವಿಶ್ವನಾಯಕರಾಗಿ ಹೊರಹೊಮ್ಮಿದ್ದು, ಪ್ರಸ್ತುತ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿಗೆ ಮತ ನೀಡಬೇಕು. ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಮನವಿ ಮಾಡಿಕೊಂಡರು.

ತಾಲ್ಲೂಕಿನ ಬಾಗೇವಾಡಿಯಲ್ಲಿ ಬಿಜೆಪಿಯಿಂದ ಬುಧವಾರ ಹಮ್ಮಿಕೊಂಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ರಾಜ್ಯದ ಎಲ್ಲ ವರ್ಗದ ಜನರು ಮೆಚ್ಚುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಚುನಾವಣೆಯಲ್ಲಿ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಮಾತನಾಡಿ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಸದಾದ್ಯಂತ ಬಿಜೆಪಿ ಅಲೆ ಬೀಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಎಲ್ಲೆಡೆ ಗೆಲುವು ಸಾಧಿಸಲಿದ್ದಾರೆ. ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡಿ ಎಲ್ಲರೂ ಮತ್ತೊಮ್ಮೆ ಪ್ರಧಾನಿ ಮೋದಿ ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು.

ತಾಲ್ಲೂಕಿನ ಬಿದರಳ್ಳಿ, ಹಮ್ಮಿಗಿ, ಶಿಂಗಟಾಲೂರ ಮೊದಲಾದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಮತಯಾಚಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಬಿಳಿಮಗ್ಗದ, ಪ್ರಶಾಂತಗೌಡ ಪಾಟೀಲ, ಮುಖಂಡ ಕೆ.ವಿ.ಹಂಚಿನಾಳ, ಲಿಂಗರಾಜಗೌಡ ಪಾಟೀಲ, ಮಂಜುನಾಥಗೌಡ ಪಾಟಿಲ, ರವಿ ಉಪ್ಪಿನಬೆಟಗೇರಿ, ಡಾ.ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ, ಪವನ ಮೇಟಿ, ಜ್ಯೋತಿ ಹಾನಗಲ್ಲ, ಪವಿತ್ರಾ ಕಲ್ಲಕುಟಿಗರ, ಪುಷ್ಪಾ ಉಕ್ಕಲಿ, ಸುಭಾಷ ಗುಡಿಮನಿ, ಬುಟ್ಟು ಹೊಸಮನಿ, ಸುನಿತಾ ನಾಗರಾಜ, ಶಿವಪ್ಪ ಚಿಕ್ಕಣ್ಣವರ, ಅರುಣಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT