20 ದಿನಕ್ಕೊಮ್ಮೆ ನೀರು; ಮೇಲ್ದರ್ಜೆಗೇರದ ಆಸ್ಪತ್ರೆ
ಲಕ್ಷ್ಮೇಶ್ವರದ ಜನತೆ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸದ್ಯ 20 ದಿನಗಳಿಗೊಮ್ಮೆ ಮೇವುಂಡಿಯಿಂದ ತುಂಗಭದ್ರಾ ನದಿ ನೀರು ಪೂರೈಕೆ ಆಗುತ್ತಿದ್ದು ಇದರಿಂದಾಗಿ ಜನತೆಗೆ ತೊಂದರೆಯಾಗಿದೆ. ಲಕ್ಷ್ಮೇಶ್ವರ ತಾಲ್ಲೂಕು ಕೇಂದ್ರವಾಗಿದ್ದರೂ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಲ್ಲ. ಸದ್ಯ ಪ್ರತಿದಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ 500 ಜನರು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಭೇಟಿ ನೀಡುತ್ತಾರೆ.