ಲಕ್ಷ್ಮೇಶ್ವರ: ರಾಜ್ಯದ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರುವುದಕ್ಕೆ ಅವಕಾಶ ಮತ್ತು ಕೇಸರಿ ಶಾಲು ಧರಿಸಿ ಬರುವುದಕ್ಕೆ ವಿಧಿಸಿರುವ ನಿರ್ಬಂಧವನ್ನು ಕೈಬಿಡಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರೇಡ್–2 ತಹಶೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಶ್ರೀರಾಮ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಪೂಜಾರ ಮಾತನಾಡಿ, ‘ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡಿದೆ. ಆದರೆ, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಈ ನಿರ್ಧಾರ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ’ ಎಂದರು.

‘ಸಮಾನತೆ, ಧರ್ಮನಿರಪೇಕ್ಷ ಹಾಗೂ ಏಕರೂಪದ ವಸ್ತ್ರ ನೀತಿಗೆ ಈ ನಿರ್ಧಾರ ವಿರುದ್ಧವಾಗಿದೆ. ಶಾಲೆ, ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಪಾಲಿಸಬೇಕೆಂಬ ನಿಯಮವಿದ್ದರೂ, ಸರ್ಕಾರವು ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಇದಕ್ಕಾಗಿ ಹಿಜಾಬ್ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿದೆ’ ಎಂದು ಹರಿಹಾಯ್ದರು.

ಹಿಂದೂ ಕಾರ್ಯಕರ್ತ ಗಂಗಾಧರ ಮೆಣಸಿನಕಾಯಿ ಮಾತನಾಡಿ, ‘ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ಮಾಡುವುದನ್ನು ನಿಷೇಧಿಸಬೇಕು. ಕಾನೂನುಬಾಹಿರ ಕೃತ್ಯಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಗೋವು, ಭಾರತೀಯ ಸಂಸ್ಕೃತಿ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಚಾರವಾಗಿದೆ’ ಎಂದು ಹೇಳಿದರು.

‘ಗೋಹತ್ಯೆ ನಿಷೇಧ ಕಾಯ್ದೆಯ ಪ್ರಕಾರ ಕಾನೂನುಬಾಹಿರವಾಗಿ ಗೋವುಗಳ ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಕ್ರಮವಾಗಿ ಗೋವುಗಳ ಸಾಗಣೆ, ಹತ್ಯೆ ಹಾಗೂ ಮಾಂಸ ಮಾರಾಟ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ಸಂಗಮೇಶ ಬೆಳವಲಕೊಪ್ಪ, ಪವನಕುಮಾರ ಹಗ್ಗರದ, ಅರುಣ ಪಾಟೀಲ, ಅಕ್ಷಯಕುಮಾರ ಕುಮಸಿ, ಬಸವರಾಜ ಶಿರಬಡಗಿ, ಆದೇಶ ಸವಣೂರ, ಹನಮಂತ ರಾಮಗೇರಿ, ಚಂದ್ರು ಅಣ್ಣಿಗೇರಿ, ಸೊಪ್ಪಿನ, ಪ್ರಶಾಂತ ಗಾಂಜಿ, ಯಶವಂತ ಬಳ್ಳಾರಿ, ಪ್ರವೀಣ ಬೋಮಲೆ, ಗೀತಾ ಬಡಿಗೇರ, ಲಕ್ಷ್ಮೀ ಬೇವಿನಮರದ, ಈರಮ್ಮ ಬೇವಿನಮರದ, ವಿದ್ಯಾ ಅಂಗಡಿ, ವಿಜಯಾ ತೆಗ್ಗಿನಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-54729322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.