ಲಕ್ಷ್ಮೇಶ್ವರ: ಪಟ್ಟಣದ ಪರ್ವತಮಲ್ಲಯ್ಯನ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗೆ ಸಿಸಿ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಮಂಗಳವಾರ 14ನೇ ವಾರ್ಡ್ನ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡಧಾರೆ ಅವರಿಗೆ ಮನವಿ ಸಲ್ಲಿಸಿದರು.

ವಾರ್ಡ್ನ ನಿವಾಸಿಗಳಾದ ಅಮರೇಶ ಗಾಂಜಿ ಮಾತನಾಡಿ, ‘ಕಳೆದ 8ರಿಂದ 10 ವರ್ಷಗಳ ಹಿಂದೆಯೇ ಸೋಮೇಶ್ವರ ಪಾದಗಟ್ಟಿಯಿಂದ ಹಳೇ ಬಸ್ ನಿಲ್ದಾಣದವರೆಗಿನ ರಸ್ತೆಯನ್ನು ವಿಸ್ತೀರ್ಣ ಮಾಡಲಾಗಿದೆ. ರಸ್ತೆ ವಿಸ್ತೀರ್ಣದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಹಾನಿ ಉಂಟಾದರೂ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಸ್ವತಃ ತಾವೇ ತೆರವುಗೊಳಿಸಿದ್ದರು. ಆದರೆ ಅಲ್ಲಿಂದ ಇಲ್ಲಿಯವರೆಗೆ ಪುರಸಭೆ ರಸ್ತೆ ನಿರ್ಮಿಸಿರಲಿಲ್ಲ. ಸತತ ಹೋರಾಟದ ಫಲವಾಗಿ ಇದೀಗ ಸೋಮೇಶ್ವರ ಪಾದಗಟ್ಟಿಯಿಂದ ಪರ್ವತಮಲ್ಲಯ್ಯನ ದೇವಸ್ಥಾನದವರೆಗೆ ಮಾತ್ರ ರಸ್ತೆ ನಿರ್ಮಾಣ ಮಾಡಿದ್ದಾರೆ. ಇನ್ನೂ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗಿನ ರಸ್ತೆಯನ್ನು ನಿರ್ಮಿಸಬೇಕಾಗಿದೆ’ ಎಂದು ಅವರು ಆಗ್ರಹಿಸಿದರು.

ವಾಗೀಶ ಪುರಾಣಿಕಮಠ, ‘ಶೀಘ್ರ ರಸ್ತೆ ನಿರ್ಮಾಣ ಮಾಡದಿದ್ದೆ ವಾರ್ಡ್ನ ಜನರು ಉಗ್ರ ಹೋರಾಟ ಮಾಡುಬೇಕಾಗುವುದು’ ಎಂದರು.

ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿ ಪಿ.ಕೆ. ಗುಡಧಾರೆ, ‘ಆದಷ್ಟು ಬೇಗನೇ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣವರೆಗೆ ಸಿಸಿ ರಸ್ತೆ ನಿರ್ಮಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಶಿವಾನಂದ ಮೆಕ್ಕಿ, ಕೊಟ್ರೇಶ ಕತ್ತಿ, ಮಂಜುನಾಥ ಗಾಂಜಿ, ಎಸ್.ಜೆ. ಪುರಾಣಿಕಮಠ, ಗಣೇಶ ಬೆಳವಗಿ, ಗಂಗಾಧರ ಬೆಳವಗಿ, ಶ್ರೇಯಾಂಕ ಹಿರೇಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-23-1285721242

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.