ಲಕ್ಷ್ಮೇಶ್ವರ: ಪಟ್ಟಣದ ಜನ್ನತ ನಗರದ ಬಡಾವಣೆಯಲ್ಲಿ ನಾಗರಾಜ ಮಾರ್ತಾಂಡಪ್ಪ ಆರೇರ ಅವರಿಗೆ ಸೇರಿದ ದೊಡ್ಡಿಯಲ್ಲಿ ಕಟ್ಟಿದ್ದ ಕುರಿಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ, ನಾಲ್ಕು ಕುರಿಮರಿಗಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಬೀದಿ ನಾಯಿಗಳು ಜಾನುವಾರುಗಳನ್ನೂ ಸಹ ಬಿಡುತ್ತಿಲ್ಲ. ಹಳ್ಳದಕೇರಿ ರೈತರು ತಮ್ಮ ಜಾನುವಾರುಗಳನ್ನು ಗಿಡದ ನೆರಳಿಗೆ ಕಟ್ಟಿದ ಸಮಯದಲ್ಲಿ ಅವುಗಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಎಲ್ಲೆಂದರಲ್ಲಿ ಕಚ್ಚಿ ಗಾಯಗೊಳಿಸಿವೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಒಟ್ಟು 20-30 ಬೀದಿ ನಾಯಿಗಳು ಹಿಂಡು ಹಿಂಡಾಗಿ ತಿರುಗಾಡುತ್ತವೆ. ಸಿಕ್ಕ ಸಿಕ್ಕ ಪ್ರಾಣಿ ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿವೆ. ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಪುರಸಭೆಯವರು ಬೀದಿ ನಾಯಿಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-23-765970539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.