ಲಕ್ಷ್ಮೇಶ್ವರ: ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ಮಂಗಳವಾರ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಸೂರಣಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಗದಗ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಲಕ್ಷ್ಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಶಿಕಲಾ ಬಸವರಾಜ ಸಾಸಲವಾಡ ಶಿಬಿರಕ್ಕೆ ಚಾಲನೆ ನೀಡಿ, ‘ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಲಕ್ಷ್ಮೇಶ್ವರ ಸೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಜನತೆಯಲ್ಲಿ ಕಣ್ಣುಗಳ ಕುರಿತು ಜಾಗೃತಿ ಮೂಡಿಸುವ ಸೇವೆಯೊಂದಿಗೆ ಅಗತ್ಯ ಇರುವವರಿಗೆ ಉಚಿತ ಶಸ್ತ್ರ ಚಿಕಿತ್ಸೆಯನ್ನೂ ಮಾಡುತ್ತಿದ್ದಾರೆ. ಗ್ರಾಮಸ್ಥರು ಶಿಬಿರದ ಉಪಯೋಗ ಪಡೆದುಕೊಳ್ಳಬೇಕು’ ಎಂದರು.

ಕೆಸಿಸಿ ಬ್ಯಾಂಕಿನ ನಿರ್ದೇಶಕ ಜಿ.ವಿ. ಪಾಟೀಲ, ಶಂಕರಣ್ಣ ಶೀರನಹಳ್ಳಿ, ಬಸವರಾಜ ಸಾಸಲವಾಡ, ಪ್ರಕಾಶ ಕಳ್ಳಿಹಾಳ, ವಿರೇಶ ಸಾಸಲವಾಡ, ಶರಣಯ್ಯ ಕುಲಕರ್ಣಿ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಇದ್ದರು. ಶಿಬಿರದಲ್ಲಿ 84 ಜನರು ತಮ್ಮ ಕಣ್ಣುಗಳನ್ನು ಪರೀಕ್ಷಿಸಿಕೊಂಡರು. ಅವರಲ್ಲಿ 29 ಜನರಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-124602273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.