ಮುಂಡರಗಿ: ‘ಪ್ರಸ್ತುತ ನರೇಗಾ ಕೂಲಿ ಮೊತ್ತವನ್ನು ₹370ಕ್ಕೆ ಹೆಚ್ಚಿಸಲಾಗಿದ್ದು, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಅನುಕೂಲವಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಹೇಳಿದರು.

ತಾಲ್ಲೂಕಿನ ಡೋಣಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ದುಡಿಯೋಣ ಬಾ’ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಕಾರ್ಮಿಕರಿಗೆ 100 ದಿನಗಳ ಕಾಲ ಉದ್ಯೋಗ ದೊರೆಯಲಿದೆ. ನರೇಗಾ ಕಾಮಗಾರಿಗಳಲ್ಲಿ ಎನ್ಎಂಎಂಎಸ್ ಮೂಲಕ ಎರಡು ಬಾರಿ ಹಾಜರಾತಿ ಕಡ್ಡಾಯವಾಗಿದ್ದು, ಅದರ ಆಧಾರದ ಮೇಲೆ ಕೂಲಿಕಾರರಿಗೆ ನೇರವಾಗಿ ವೇತನ ಪಾವತಿಸಲಾಗುತ್ತದೆ’ ಎಂದರು.

‘ಜಾಬ್ ಕಾರ್ಡ್ ಇಲ್ಲದ ಕಾರ್ಮಿಕರಿಂದ ಅಗತ್ಯ ದಾಖಲೆಗಳನ್ನು ಪಡೆದು ಉದ್ಯೋಗ ಚೀಟಿ ಹಾಗೂ ಕೆಲಸದ ಬೇಡಿಕೆ ಪಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ಗ್ರಾಮೀಣ ಭಾಗದ ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡ, ಬದು ನಿರ್ಮಾಣ, ಕೆರೆ ಹೂಳೆತ್ತುವುದು, ಜಲಮೂಲಗಳ ದಡದಲ್ಲಿ ಅರಣ್ಯೀಕರಣ, ನೆಡುತೋಪು ನಿರ್ಮಾಣ, ಕಾಲುವೆಗಳ ಪುನಶ್ಚೇತನ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಹಾಯಕ ಕೃಷಿ ಇಲಾಖೆ ಅಧಿಕಾರಿ ಎಸ್.ಬಿ. ರಾಮೇನಹಳ್ಳಿ, ಪಿಡಿಒ ಪಾರ್ವತಿ ಹೊಂಬಳ, ಗ್ರಾಮ ಪಂಚಾಯಿತಿ ಸದಸ್ಯರು, ಕಾಯಕ ಬಂಧುಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.