ಗದಗ: ‘ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಲಿಂಗಾಯತ- ಬಸವಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 1ರಿಂದ ಅಕ್ಟೋಬರ್ವರೆಗೆ ರಾಜ್ಯದಾದ್ಯಂತ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದ್ದು, ಸೆ.9ರಂದು ಗದಗ ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು’ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ನಗರದ ತೋಂಟದಾರ್ಯ ಮಠದ ಅನುಭವ ಮಂಟಪದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ರಾಜ್ಯ ಸರ್ಕಾರ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿ ಒಂದು ವರ್ಷವಾಗಿದೆ. ಬಸವಣ್ಣನವರು ಕರ್ನಾಟಕ ಮಾತ್ರವಲ್ಲ, ವಿಶ್ವದ ಸಾಂಸ್ಕೃತಿಕ ನಾಯಕರಾಗಿದ್ದಾರೆ. ಅವರು ರಾಜಕೀಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ನೈತಿಕ, ಸಾಂಸ್ಕೃತಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಪರಿವರ್ತನೆ ತಂದವರು’ ಎಂದು ಹೇಳಿದರು.

‘ಎಲ್ಲರಿಗೂ ನೆಲ ಜಲ ಒಂದೇ ಆಗಿರುವಾಗ ತನ್ನನ್ನು ತಾನು ಅರಿತರೆ ಕುಲ ಒಂದೇ ಎಂದು ಸಾರಿದವರು. ಇಂಥ ದಾರ್ಶನಿಕರ ಆಶಯದಂತೆ ಸಮಸಮಾಜ ನಿರ್ಮಾಣ, ವ್ಯಸನಮುಕ್ತ ಸಮಾಜ ನಿರ್ಮಾಣ, ಅಂಧಶ್ರದ್ಧೆ ಅಳಿಸಿ ಸುಜ್ಞಾನ ಬೆಳೆಸುವುದು, ಸದೃಢ ಸಮಾಜ ಕಟ್ಟುವುದು, ಮಕ್ಕಳಲ್ಲಿ ಅಧ್ಯಾತ್ಮದ ಅರಿವು ಮೂಡಿಸುವುದು, ಮಹಿಳೆಯರ ಘನತೆ ಕಾಪಾಡುವುದು, ವ್ಯಕ್ತಿತ್ವ ವಿಕಸನ ಇತ್ಯಾದಿ ಬಸವ ಸಂಸ್ಕೃತಿ ಅಭಿಯಾನದ ಆಶಯಗಳಾಗಿವೆ’ ಎಂದರು.

‘ಈ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ತನು, ಮನ, ಧನ ಸಹಾಯ, ಸಹಕಾರ ನೀಡಬೇಕು’ ಎಂದು ತಿಳಿಸಿದರು.

ಮುಂಡರಗಿ ತಾಲ್ಲೂಕು ಜಾಗತಿಕ ಲಿಂಗಾಯ ಮಹಾಸಭಾ ಅಧ್ಯಕ್ಷ ನವಲಗುಂದ ಮಾತನಾಡಿ, ‘ಈ ಅಭಿಯಾನ ಕುರಿತು ಹೆಚ್ಚಿನ ಪ್ರಚಾರ ಮಾಡಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದರು.

ಜಿಲ್ಲಾ ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ ಪ್ರಾಸ್ತಾವಿಕ ಮಾತನಾಡಿ, ಅಭಿಯಾನದ ರೂಪುರೇಷೆ ವಿವರಿಸಿದರು. ಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಚಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಪಾಲಾಕ್ಷಿ ಗುಣದಿನ್ನಿ, ಬಸವರಾಜ ಅಂಗಡಿ, ಗೌರಕ್ಕ ಬಡಿಗಣ್ಣವರ, ಗಿರಿಜಾ ಹಸಬಿ, ಪ್ರೊ. ಕೆ.ಎಚ್. ಬೇಲೂರ, ಚನ್ನಬಸಪ್ಪ ಕಂಠಿ ಇದ್ದರು. ಪ್ರಕಾಶ ಅಸುಂಡಿ ಸ್ವಾಗತಿಸಿದರು. ಮಂಜುಳಾ ಹಾಸಿಲಕರ ವಂದಿಸಿದರು.

ಬಸವ ಸಂಸ್ಕೃತಿ ಅಭಿಯಾನದ ಪೂರ್ವದಲ್ಲಿ ಎಲ್ಲ ತಾಲೂಕುಗಳಲ್ಲಿ ಜಾಗೃತಿ ಮೂಡಿಸಿ ಇದರಲ್ಲಿ ಹೆಚ್ಚು ಯುವಕರು ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು.
– ವಿವೇಕಾನಂದಗೌಡ ಪಾಟೀಲ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ

ಬಸವ ಸಂಸ್ಕೃತಿ ಅಭಿಯಾನದ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳನ್ನು ರಚಿಸಿ ಅವರಿಗೆ ಜವಾಬ್ದಾರಿಗಳನ್ನು ನೀಡಲು ಕ್ರಮವಹಿಸಬೇಕಿದೆ.
– ಕೆ.ಎ.ಬಳಿಗೇರ, ಅಧ್ಯಕ್ಷ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.