ಗದಗ: ‘ಕನೇರಿ ಶ್ರೀಗಳು ನಮ್ಮ ಪೂರ್ವಾಶ್ರಮದ ಸಂಬಂಧಿಗಳಿಗೆ ನಾವು 20 ತೊಲೆ ಬಂಗಾರ ಕೊಟ್ಟಿರುವುದಾಗಿ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಈ ಆರೋಪ ಶುದ್ಧ ಸುಳ್ಳು. ಈ ರೀತಿಯ ಆರೋಪ ಮಾಡುವ ಮೂಲಕ ಬಸವ ಸಂಸ್ಕೃತಿ ಅಭಿಯಾನದ ಮುಂಚೂಣಿಯಲ್ಲಿರುವ ನಮ್ಮನ್ನು ಹೆದರಿಸಿ ಹಿಂದೆ ಸರಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಡಂಬಳ-ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದ್ದಾರೆ.

‘ಈ ಮೊದಲು ನಾವು ನಮ್ಮ ಪೂರ್ವಾಶ್ರಮ ಸಂಬಂಧಿಗಳ ಯಾವುದೇ ಮದುವೆಗೆ ಹೋದ ಉದಾಹರಣೆ ಇಲ್ಲ. ಮದುವೆಯಾಗುವ ಹುಡುಗ ನಮ್ಮ ಪ್ರಸಾದನಿಲಯದ ವಿದ್ಯಾರ್ಥಿಯಾಗಿದ್ದವನು. ಅವನ ದಯನೀಯ ಪ್ರಾರ್ಥನೆಗೆ ಹೋಗಲೇಬೇಕಾದ ಅನಿವಾರ್ಯತೆ. ಆದಾಗ್ಯೂ ಮದುವೆಯ ದಿನ ಹೋಗದೇ; ಹಿಂದಿನ ದಿನ ನಾವು ಎಲ್ಲ ಮದುವೆಗಳಿಗೆ ಹೋದಂತೆ ಹೋಗಿ ಅವನಿಗೊಂದು ಶಾಲು ಹೊದಿಸಿ ಆಶೀರ್ವದಿಸಿ ಬರಲಾಗಿದೆ. ಈ ಮದುವೆಯಲ್ಲಿ ಯಾವುದೇ ಬಂಗಾರ ಕೊಟ್ಟಿಲ್ಲ. 20 ತೊಲೆ ಬಂಗಾರ ಹಾಕಿದರು ಎಂದು ಹೇಳಿರುವುದು ನಮ್ಮ ಚಾರಿತ್ರ್ಯಹನನದ ಕಾರ್ಯವಾಗಿದೆ’ ಎಂದು ಕಿಡಿಕಾರಿದ್ದಾರೆ.

‘ಲಿಂಗಾಯತ ಸ್ವತಂತ್ರ ಧರ್ಮವಾದರೆ ಲಿಂಗಾಯತರು ಧಾರ್ಮಿಕ ಅಲ್ಪಸಂಖ್ಯಾತರಾಗುವ ಮೂಲಕ ಸಂವಿಧಾನದತ್ತವಾದ ಅನೇಕ ಸೌಲಭ್ಯಗಳನ್ನು ಪಡೆಯುತ್ತಾರೆ. ಇದು ಲಿಂಗಾಯತರ ಭವಿಷ್ಯದ ಹಿತದೃಷ್ಟಿಯಿಂದ ನಡೆದ ಹೋರಾಟ. ಇದರಿಂದ ದೇಶ ಹಾಳಾಗುತ್ತದೆ ಎಂದು ಹೇಳುವುದು ಸರಿಯಲ್ಲ. ಈ ಮೊದಲು ಭಾರತೀಯರೇ ಆಗಿರುವ ಬೌದ್ಧರು, ಸಿಖ್ ಮತ್ತು ಇತ್ತೀಚೆಗೆ ಜೈನಧರ್ಮದವರಿಗೆ ಸ್ವತಂತ್ರ ಧರ್ಮದ ಸ್ಥಾನ ನೀಡಲಾಗಿದೆ. ಇದರಿಂದ ದೇಶದ ಭದ್ರತೆಗೆ ಯಾವ ಹಾನಿಯಾಗಿದೆ? ಅದೇ ಮಾದರಿಯಲ್ಲಿ ದೇಶಪ್ರೇಮಿಗಳಾಗಿರುವ ಲಿಂಗಾಯತರ ಸಾಂವಿಧಾನಿಕ ಹಕ್ಕುಗಳನ್ನು ಪಡೆಯುವುದು ಲಿಂಗಾಯತ ಹೋರಾಟದ ಉದ್ದೇಶವಾಗಿದೆ’ ಎಂದು ತಿಳಿಸಿದ್ದಾರೆ.

‘ಇದನ್ನು ತಾತ್ತ್ವಿಕ ನೆಲೆಯಲ್ಲಿ ಅವರು ಖಂಡಿಸುವುದನ್ನು ಬಿಟ್ಟು, ಹೋರಾಟದ ಮುಂಚೂಣಿಯಲ್ಲಿರುವ ನಮ್ಮನ್ನು ಮಾತ್ರ ಗುರಿ ಮಾಡಿಕೊಂಡು ಸುಳ್ಳು ಆರೋಪ ಹೊರಿಸುವುದು ಎಷ್ಟು ಸರಿ? ನಾವು ಅಂಥ ಕೆಲಸ ಮಾಡಿದ್ದರೆ ಅದನ್ನು ಭಕ್ತರು ಪ್ರಶ್ನಿಸುತ್ತಾರೆ. ನಿಮ್ಮ ಮಠದ ಹಾಗೆಯೇ ನಮ್ಮ ಮಠದ ಆಡಳಿತವೂ ಪಾರದರ್ಶಕವೇ ಆಗಿದೆ. ಮಠದ ಎಲ್ಲ ವ್ಯವಹಾರಗಳನ್ನು ವ್ಯವಸ್ಥಾಪಕರು, ವಿದ್ಯಾಸಂಸ್ಥೆಗಳ ವ್ಯವಹಾರಗಳನ್ನು ಆಡಳಿತಾಧಿಕಾರಿಗಳು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ’ ಎಂದು ತಿಳಿಸಿದ್ದಾರೆ.

ನಮಗೆ ಬೇಕಾದವರನ್ನು ನೇಮಿಸಿಕೊಂಡು ಯಾವುದೇ ಭ್ರಷ್ಟ ವ್ಯವಹಾರ ಮಾಡಿಲ್ಲ. ಸುಳ್ಳು ಆರೋಪಗಳ ಮೂಲಕ ಚಾರಿತ್ರ್ಯಹನನ ಮಾಡುವ ಕೆಲಸ ಯಾರೂ ಮಾಡಬಾರದು. ಇದು ಮಠಾಧಿಪತಿಗಳಾದವರಿಗೆ ಶೋಭೆ ತರುವಂತಹದ್ದಲ್ಲ

- ಸಿದ್ಧರಾಮ ಸ್ವಾಮೀಜಿ ತೋಂಟದಾರ್ಯ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.